ಯಲ್ಲಾಪುರ:ತಾಲೂಕಿನ ಆರತಿಬೈಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಗುರುವಾರ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಶುಕ್ರವಾರ ಸಂಭವಿಸಿದೆ. ಇದರಿಂದ ಸ್ಥಳೀಯರಲ್ಲಿ ಕೆಲಕಾಲ ತೀವ್ರ ಆತಂಕ ಸೃಷ್ಟಿಯಾಗಿತ್ತು.
ಘಟನೆ ಸಂಭವಿಸುತ್ತಿದ್ದಂತೆ ಕಾರ್ಯಪ್ರವೃತ್ತರಾದ ಯಲ್ಲಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ದಳ ತಕ್ಷಣವೇ ಸ್ಥಳಕ್ಕೆ ಧಾವಿಸಿದರು. ಯಾವುದೇ ರೀತಿಯ ಅಹಿತಕರ ಅಥವಾ ಅಪಾಯಕಾರಿ ಘಟನೆಗಳು ನಡೆಯದಂತೆ ಹೆದ್ದಾರಿಯುದ್ದಕ್ಕೂ ಬಿಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.

ಅದೃಷ್ಟವಶಾತ್ ಮಗುಚಿ ಬಿದ್ದ ಟ್ಯಾಂಕರ್ನಿಂದ ಯಾವುದೇ ಗ್ಯಾಸ್ ಸೋರಿಕೆಯಾಗಿಲ್ಲ ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಿದ್ದು, ದೊಡ್ಡ ಮಟ್ಟದ ಅಪಾಯವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ. ಗ್ಯಾಸ್ ಸೋರಿಕೆ ಇಲ್ಲದಿರುವುದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡದೆ, ನಿಯಂತ್ರಿಸಲಾಗಿತು.
ಬಳಿಕ ಕ್ರೇನ್ ಮೂಲಕ ಟ್ಯಾಂಕರ್ ಅನ್ನು ಸುರಕ್ಷಿತವಾಗಿ ರಸ್ತೆಯಿಂದ ಪಕ್ಕಕ್ಕೆ ಸರಿಸುವ ಕಾರ್ಯಾಚರಣೆ ನಡೆಯುತ್ತಿರುವುದರಿಂದ, NH-52 ರಲ್ಲಿ ವಾಹನ ಸಂಚಾರವನ್ನು ಈ ವೇಳೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಸಾಧ್ಯತೆಯಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
