ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Uttara-Kannada

ಸರ್ಕಾರಿ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಸತ್ತು ಚುನಾವಣೆ ಯಶಸ್ವಿ

Pakka News Web • 14 ಜುಲೈ 2026,

ಕಾರವಾರ:ಪ್ರಸ್ತುತ ದಿನಗಳಲ್ಲಿ ಎಸ್.ಐ.ಆರ್. ಮಾಹಿತಿ ಹಾಗೂ ಜಾಗೃತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜುಗಳಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳನ್ನು ನೇರ ಚುನಾವಣೆಯ ಮೂಲಕ ಆಯ್ಕೆ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಕಾರವಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರ ನಿರ್ದೇಶನದ ಮೇರೆಗೆ ಅತ್ಯಂತ ವ್ಯವಸ್ಥಿತವಾಗಿ ವಿದ್ಯಾರ್ಥಿ ಸಂಸತ್ತಿನ ಚುನಾವಣೆ ನಡೆಯಿತು.

ಕಾಲೇಜಿನ ಪ್ರಾಚಾರ್ಯ ರಮೇಶ್ ಪತ್ರೇಕರ್ ಅವರು ಚುನಾವಣಾ ಆಯುಕ್ತರಾಗಿ ಜವಾಬ್ದಾರಿ ನಿರ್ವಹಿಸಿದರು. ಹಿರಿಯ ಉಪನ್ಯಾಸಕಿ ಕಲ್ಪನಾ ಗಾಂವ್ಕರ್ ವೀಕ್ಷಕರಾಗಿ ಹಾಗೂ ಸ್ವೀಪ್ ಸಂಚಾಲಕರಾದ ವಿದ್ಯಾ ಬಿ. ಮತ್ತು ಮಂಜುನಾಥ್ ಗುನಗಾ ಅವರ ನೇತೃತ್ವದಲ್ಲಿ ಚುನಾವಣೆ ನಡೆಯಿತು. ಕಾಲೇಜಿನ ವಿದ್ಯಾರ್ಥಿಗಳು ಅತ್ಯಂತ ಶಿಸ್ತುಬದ್ಧವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ಚುನಾವಣೆ ಸುಗಮವಾಗಿ ನಡೆಯಲು ಸಹಕರಿಸಿದರು. ಸಂಸ್ಥೆಯ ಎಲ್ಲಾ ಹಿರಿಯ ಹಾಗೂ ಕಿರಿಯ ಉಪನ್ಯಾಸಕರು ತಮ್ಮ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದರು.

ಕಾಲೇಜು ಯೂನಿಯನ್ ನ ವಿದ್ಯಾರ್ಥಿ ಕಾರ್ಯದರ್ಶಿಯಾಗಿ ಅಮಾನ್ ಬಾಂದೇಕರ್ ಮತ್ತು ಸಮೀಕ್ಷಾ ಆಚಾರಿ ಕ್ರೀಡಾ ಕಾರ್ಯದರ್ಶಿಯಾಗಿ ಸಮರ್ಥ ನಾಯ್ಕ ಮತ್ತು ಅಲಿಷಾ ಆಲ್ಫಾನ್ಸೋ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಎಚ್.ಎಸ್.ಪ್ರದ್ಯಮ್ನ ಮತ್ತು ಆರ್ಯೇಶ್ವರಿ ದುರ್ಗೇಕರ್ ಆಯ್ಕೆಯಾದರು.  ಪ್ರಜಾಪ್ರಭುತ್ವ ಮಾದರಿಯಲ್ಲಿ ನಡೆದ ಈ ಚುನಾವಣೆಯಲ್ಲಿ ಜಯಗಳಿಸಿ ನೂತನವಾಗಿ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಸರ್ವ ಉಪನ್ಯಾಸಕ ವೃಂದದವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250