ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Trending

ಸರ್ಕಾರೇತರ ಸಂಸ್ಥೆಗಳ ನೋಂದಣಿಗೆ ಸೂಚನೆ

Pakka News Web • 15 ಜುಲೈ 2026,

ಕಾರವಾರ:ಮಕ್ಕಳಿಗಾಗಿ (6 ರಿಂದ 18 ವರ್ಷದೊಳಗಿನ) ಕಾರ್ಯ ನಿರ್ವಹಿಸುತ್ತಿರುವ ಸರ್ಕಾರೇತರ ಸಂಸ್ಥೆಗಳು/ ನಾಗರಿಕ ಸಾಮಾಜಿಕ ಸಂಸ್ಥೆಗಳು/ ಟ್ರಸ್ಟ್/ ಧಾರ್ಮಿಕ/ ಖಾಸಗಿ/ಸರ್ಕಾರ ಇಲಾಖೆಗಳಿಂದ ನಡೆಸಲ್ಪಡುವ ವಸತಿ ನಿಲಯಗಳು ಮತ್ತು ವಸತಿಯುತ ಶಾಲಾ ಕಾಲೇಜುಗಳನ್ನು ಕಡ್ಡಾಯವಾಗಿ ನೋಂದಾಯಿಸುವಂತೆ ಸರ್ಕಾರದ ಕಾರ್ಯದರ್ಶಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ತಿಳಿಸಿದೆ.

ಮಕ್ಕಳಿಗಾಗಿ ನಡೆಸಲ್ಪಡುವ (6 ರಿಂದ 18 ವರ್ಷದೊಳಗಿನ ವಸತಿ ನಿಲಯಗಳು, ವಸತಿ ಶಾಲೆ/ಕಾಲೇಜುಗಳ ನೋಂದಣಿ ಅಧಿಕಾರಿಗಳಾಗಿ ಜಿಲ್ಲಾಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದು, ನೋಂದಣಿ ಪ್ರಕ್ರಿಯೆ ಕಾರ್ಯವನ್ನು ಮೇಲ್ವಿಚಾರಣೆ ನಡೆಸುವ ಅಧಿಕಾರ ಹೊಂದಿರುತ್ತಾರೆ. ಆದ್ದರಿಂದ ವಸತಿ ನಿಲಯಗಳು, ವಸತಿಯುತ ಶಾಲೆ/ಕಾಲೇಜುಗಳನ್ನು ಕಡ್ಡಾಯವಾಗಿ ನೋಂದಣಿ ಮಾಡಬೇಕಾಗಿದ್ದು ನಮೂನೆ-1 ರಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರವಾರರವರಿಗೆ ಜು.31 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾರವಾರ, ಕಚೇರಿ ವೇಳೆಯಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 08382-220182, 7090275875 ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250