ದಾಂಡೇಲಿಯ ಸಾಯಿನಗರದ ಉದ್ಯಾನವನದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಸಂಭವಿಸಿದೆ. ಮೂಲತಃ ಗಾಂಧಿನಗರದ ರೈಲ್ವೆ ಹಳಿ ಸಮೀಪದ ನಿವಾಸಿಯಾಗಿದ್ದ ಮಂಜುನಾಥ ಮಲ್ಲೇಶ ನಿಂಬಾಳ್ಕರ (23) ಮೃತಪಟ್ಟ ದುರ್ದೈವಿಯಾಗಿದ್ದಾನೆ.
ಕಳೆದ ಮೂರ್ನಾಲ್ಕು ವರ್ಷಗಳಿಂದ ತನ್ನ ತಾಯಿ ಹಾಗೂ ಸಹೋದರಿಯರೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದ ಈತ, ಮೂರು ದಿನಗಳ ಹಿಂದೆಯಷ್ಟೇ ದಾಂಡೇಲಿಗೆ ಬಂದಿದ್ದನೆಂದು ತಿಳಿದುಬಂದಿದೆ. ಆದರೆ, ಈತನ ಆತ್ಮಹತ್ಯೆಗೆ ನಿಖರವಾದ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಾಗಿದೆ.
