ಶಿರಸಿ ನಗರದ ಸಾರ್ವಜನಿಕ ರಸ್ತೆ ಬದಿಯಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿ ತೂರಾಡುತ್ತಿದ್ದ ಹಾವೇರಿ ಜಿಲ್ಲೆಯ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕೋಟಿಗೇರಿ ಓಣಿಯ ಮೊಹಮ್ಮದ್ ಸಿದ್ದೀಖ್ ಮೊಹಮ್ಮದ್ ಗೌಸ್ ಮೂಡಿ ಎಂದು ಗುರುತಿಸಲಾಗಿದೆ. ಈತ ಜುಲೈ 15ರಂದು ಬೆಳಿಗ್ಗೆ 10:45ರ ಸುಮಾರಿಗೆ ಶಿರಸಿ ನಗರದ ದುಂಡಶಿ ನಗರದ ಮಿಲ್ ಎದುರಿನ ರಸ್ತೆ ಪಕ್ಕದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದಾಗ, ಗಸ್ತಿನಲ್ಲಿದ್ದ ಹೊಸ ಮಾರುಕಟ್ಟೆ ಠಾಣೆಯ ಪಿಎಸ್‌ಐ ಬಸವರಾಜ ಕನಶೆಟ್ಟಿ ಅವರು ವಶಕ್ಕೆ ಪಡೆದಿದ್ದಾರೆ. ಶಿರಸಿಯ ಪಂಡಿತ್ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ ಈತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಆರೋಪಿಯ ವಿರುದ್ಧ ಹೊಸ ಮಾರುಕಟ್ಟೆ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.