ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜು. 17ರಂದು ಖಾಸಗಿ ಉದ್ಯೋಗ ಮೇಳ ಹಾಗೂ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಚನ್ನಮ್ಮಾ ಮೆರೈನ್ಸ್ ಸರ್ವೀಸ್, ಕಾರವಾರ ಹಾಗೂ ಅನುಶರಣ ಮೆರೈನ್ ಸರ್ವೀಸ್, ಫಾತೋರ್ಡಾ, ಮಡಗಾಂವ (ಗೋವಾ) ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಂದರ್ಶನದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಯಾವುದೇ ಪದವಿ, ಐಟಿಐ ಹಾಗೂ ಡಿಪ್ಲೊಮಾ ಮಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದು. ನೇರ ಸಂದರ್ಶನವು ಯೋಜನಾ ಉದ್ಯೋಗ ವಿನಿಮಯ ಕಚೇರಿ, ಶ್ರೀಮತಿ ಪ್ರೇಮಾಬಾಯಿ ರಾಯ್ಕರ್ ಬಿಲ್ಡಿಂಗ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಮೀಪ, ಸಿವಿಲ್ ಕೋರ್ಟ್ ರಸ್ತೆ, ಕಾರವಾರದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2.30ರವರೆಗೆ ನಡೆಯಲಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ರೆಮ್ಯೂಮ್, ಆಧಾರ್ ಕಾರ್ಡ್, ಇತ್ತೀಚಿನ ಭಾವಚಿತ್ರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿ ಸಬಹುದು. ಹೆಚ್ಚಿನ ಮಾಹಿತಿಗಾಗಿ ಯೋಜನಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು. ಅಲ್ಲದೆ ಮೊಬೈಲ್ ಸಂಖ್ಯೆ 8310044796 ಅಥವಾ ಕಚೇರಿ ದೂರವಾಣಿ ಸಂಖ್ಯೆ 08382-226386ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಯೋಜನಾ ಉದ್ಯೋಗ ವಿನಿಮಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಉದ್ಯೋಗ ಪಡೆಯಲು ಉತ್ತಮ ಅವಕಾಶ!
