ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Uttara-Kannada

ಭತ್ತದ ಬೆಳೆ ಸ್ಪರ್ಧೆ :ರೈತರಿಂದ ಅರ್ಜಿ ಆಹ್ವಾನ

Pakka News Web • 20 ಜುಲೈ 2026,

ಕಾರವಾರ: ಪ್ರಸಕ್ತ ಸಾಲಿನ ಬೆಳೆ ಸ್ಪರ್ಧೆ ಯೋಜನೆಯಡಿಯಲ್ಲಿ ಭತ್ತದ ಬೆಳೆಯಲ್ಲಿ ಅಧಿಕ ಇಳುವರಿ ಪಡೆಯುವ ರೈತರಿಗೆ ಕೃಷಿ ಪ್ರಶಸ್ತಿ ನೀಡಲು ಕೃಷಿ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸುವ ಅರ್ಜಿದಾರರು ಸ್ವತಃ ಬೇಸಾಯದಲ್ಲಿ ತೊಡಗಿರುವ ಕ್ರಿಯಾಶೀಲ ಕೃಷಿಕರಾಗಿರಬೇಕು. ಸ್ವಂತ ಜಮೀನು ಹೊಂದಿರದಿದ್ದರೂ ಸಹ ಭೂ ಸುಧಾರಣಾ ಕಾಯ್ದೆಯ ನಿಯಮಗಳಿಗೆ ಒಳಪಟ್ಟು ಬೇಸಾಯ ಮಾಡುತ್ತಿರುವ ರೈತರು ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಮಹಿಳೆಯರನ್ನು ಪ್ರೋತ್ಸಾಹಿಸಲು ಮತ್ತು ಇತರ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಈ ಯೋಜನೆಯಲ್ಲಿ ಮಹಿಳಾ ರೈತರಿಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲು ಮುಕ್ತ ಅವಕಾಶ ನೀಡಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಕನಿಷ್ಠ 1 ಎಕರೆ ಜಮೀನಿನ ವಿಸ್ತೀರ್ಣ ಇರುವುದು ಕಡ್ಡಾಯವಾಗಿದೆ.

ಆಸಕ್ತ ರೈತರು ತಮ್ಮ ಜಮೀನಿನ ಪಹಣಿ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನಕಲು ಪ್ರತಿ, ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದೊಂದಿಗೆ ಜಮೀನಿನ ಕ್ಷೇತ್ರ ಚಿತ್ರಗಳನ್ನು (ಫೋಟೋ) ಲಗತ್ತಿಸಬೇಕಾಗುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ಮುಂಬರುವ ಆಗಸ್ಟ್ 31ರ ಒಳಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕೆಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250