ಸತತವಾಗಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿ.ಪಂ. ಹಾಗೂ ತಾಲೂಕು ಆಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿದೆ. ಜೊಯಿಡಾ ಹಾಗೂ ದಾಂಡೇಲಿ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಸುರಿಮಳೆಯಿಂದಾಗಿ ವಿದ್ಯಾರ್ಥಿಗಳ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆಯಿದ್ದು, ಮಕ್ಕಳ ಭದ್ರತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಜುಲೈ 23 ರಂದು ಜೊಯಿಡಾ, ದಾಂಡೇಲಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಆಡಳಿತ ತಿಳಿಸಿದೆ.
ಮಳೆಯ ತೀವ್ರತೆ ಹೆಚ್ಚಿರುವುದರಿಂದ ಸಾರ್ವಜನಿಕರು ಹಾಗೂ ಪೋಷಕರು ಜಾಗರೂಕರಾಗಿರಲು ಮತ್ತು ಮಕ್ಕಳ ರಕ್ಷಣೆಗೆ ಆದ್ಯತೆ ನೀಡಲು ತಹಸೀಲ್ದಾರರು ಸೂಚಿಸಿದ್ದಾರೆ.
