ಉತ್ತರ ಕನ್ನಡ ಜಿಲ್ಲೆಯ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯಾಧಿಕಾರಿ ಹಾಗೂ ಎಂ.ಬಿ.ಬಿ.ಎಸ್. ವೈದ್ಯಾಧಿಕಾರಿ ಹುದ್ದೆಗಳ ಭರ್ತಿಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನ ಆಹ್ವಾನಿಸಲಾಗಿದೆ. ಜಿಲ್ಲಾ ಆರೋಗ್ಯ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ (NHM) ಅಡಿಯಲ್ಲಿ ಈ ನೇಮಕಾತಿ ನಡೆಯಲಿದೆ.
ಎಂ.ಡಿ., ಎಂ.ಎಸ್., ಡಿಪ್ಲೋಮಾ ಅಥವಾ ಎಂ.ಬಿ.ಬಿ.ಎಸ್. ವಿದ್ಯಾರ್ಹತೆ ಹೊಂದಿದ್ದು, ಕರ್ನಾಟಕ ಮೆಡಿಕಲ್ ಕೌನ್ಸಿಲ್ನಲ್ಲಿ (KMC) ನೋಂದಣಿಯಾಗಿರುವ ವೈದ್ಯರು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅರ್ಹ ಅಭ್ಯರ್ಥಿಗಳು ರಜಾ ದಿನಗಳನ್ನು ಹೊರತುಪಡಿಸಿ, ಪ್ರತಿದಿನ ಕಚೇರಿ ವೇಳೆಯಲ್ಲಿ ಕಾರವಾರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ (DHO) ಕಚೇರಿ ಅಥವಾ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿಗಳ ಕಚೇರಿಗೆ ಎಲ್ಲಾ ಮೂಲ ದಾಖಲೆಗಳೊಂದಿಗೆ ನೇರವಾಗಿ ಹಾಜರಾಗಬಹುದು.
ಸರ್ಕಾರಿ ಮಾರ್ಗಸೂಚಿಯಂತೆ ತಜ್ಞ ವೈದ್ಯಾಧಿಕಾರಿಗಳಿಗೆ ಮಾಸಿಕ 1,30,000 ರೂ. ಹಾಗೂ ಎಂ.ಬಿ.ಬಿ.ಎಸ್. ವೈದ್ಯಾಧಿಕಾರಿಗಳಿಗೆ 60,000 ರೂ. ವೇತನ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು (ಮೊ: 9449843065) ಅಥವಾ ಕಾರವಾರದ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿಗಳನ್ನು (ಮೊ: 9448007972) ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
