ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Crime

ಅಲ್ಪಸಂಖ್ಯಾತನ ಮೇಲೆ ಬಿಜೆಪಿ ಮುಖಂಡನಿಂದ ಹಲ್ಲೆ – ವಿಡಿಯೋ ವೈರಲ್, ಗ್ರಾಮಸ್ಥರ ಆಕ್ರೋಶ

Pakka News Web • 24 ಜುಲೈ 2026,

ಹಳಿಯಾಳ ತಾಲೂಕಿನ ಕೆಸರೊಳ್ಳಿ ಗ್ರಾಮದಲ್ಲಿ ಬಿಜೆಪಿ ಜಿಲ್ಲಾ ಒಬಿಸಿ ಪ್ರಧಾನ ಕಾರ್ಯದರ್ಶಿ ಗಣಪತಿ ಸಹದೇವ ಕರೆಂಜೇಕರ್ (ಅಜೋಬಾ) ಹಾಗೂ ಆತನ ಕುಟುಂಬಸ್ಥರು, ಮಿನ್ ಸೋಜ್ ಎಂಬ ಕ್ರೈಸ್ತ ಸಮುದಾಯದ ವ್ಯಕ್ತಿಯ ಮೇಲೆ ಬಡಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ನಡೆದ ಈ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತಾಲೂಕಿನಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಆರೋಪಿ ಗಣಪತಿ ಕರೆಂಜೇಕರ್ ಹಳಿಯಾಳ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಈತನ ವಿರುದ್ಧ ಕೊಲೆ ಯತ್ನ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸೇರಿದಂತೆ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಘಟನೆಯನ್ನು ಖಂಡಿಸಿ ಕೆಸರೊಳ್ಳಿಯ ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತ ಸಮುದಾಯದ ಗ್ರಾಮಸ್ಥರು ಒಗ್ಗೂಡಿ ತಹಶೀಲ್ದಾರ್ ಫಿರೋಜ್ ಷಾ ಸೋಮನಕಟ್ಟಿ ಅವರಿಗೆ ಮನವಿ ಸಲ್ಲಿಸಿದ್ದು, ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಂಸದರು/ಶಾಸಕರು ಹಾಗೂ ಸ್ಥಳೀಯ ನಾಯಕರಾದ ಮಾಜಿ ಶಾಸಕರು ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾ ಪಾಟೀಲ್ ಅವರನ್ನು ಭೇಟಿ ಮಾಡಿದ ಗ್ರಾಮಸ್ಥರು, ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದು, ಇಂತಹ ಗುಂಡಾಗಿರಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250