ಜುಲೈ 26, 2026
ಭಾನುವಾರ

ನಮ್ಮನ್ನು ಅನುಸರಿಸಿ

Crime

ಮರಕ್ಕೆ ಬೈಕ್ ಡಿಕ್ಕಿ : ಯುವಕನ ಸಾ*ವು!

Pakka News Web • 24 ಜುಲೈ 2026,

ಹಳಿಯಾಳ-ದಾಂಡೇಲಿ ರಾಜ್ಯ ಹೆದ್ದಾರಿಯ ತಾಟಗೇರಾ ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ನಿಯಂತ್ರಣ ತಪ್ಪಿದ ಬೈಕ್ ಮರಕ್ಕೆ ಡಿಕ್ಕ ಹೊಡೆದು ಯುವಕನೊಬ್ಬ ಪ್ರಾಣ ಕಳೆದುಕೊಂಡ ಘಟನೆ ದಾಂಡೇಲಿಯಲ್ಲಿ ಸಂಭವಿಸಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಿವಾಸಿ ಪ್ರಸಾದ್ ರಾಘವೇಂದ್ರ ಹುಲ್ಕುಂದ (22) ಮೃತಪಟ್ಟ ದುರ್ಭಾಗ್ಯಕರ ಯುವಕ. ಪ್ರಸಾದ್ ಅವರು ಬೈಲಹೊಂಗಲದಿಂದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಉಳವಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನವು ರಸ್ತೆ ಬದಿಯ ಮರಕ್ಕೆ ಜೋರಾಗಿ ಡಿಕ್ಕಿ ಹೊಡೆದ ಪರಿಣಾಮ, ಅವರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು.

ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳೀಯರು ಅವರನ್ನು ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರಾದರೂ, ಪರೀಕ್ಷಿಸಿದ ವೈದ್ಯರು ಅವರು ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿರುವುದಾಗಿ ದೃಢಪಡಿಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ವಿಷಯ ತಿಳಿದ ಕೂಡಲೇ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.


ಪ್ರಚಾರ #7
ಜಾಹೀರಾತು ಸ್ಥಳ ಲಭ್ಯವಿದೆ
336x280
ಪ್ರಚಾರ #26
ಜಾಹೀರಾತು ಸ್ಥಳ ಲಭ್ಯವಿದೆ
300x250