ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

ಹೋಮ್‌ಸ್ಟೇನಲ್ಲಿ ಯುವಕ ಆತ್ಮ*ಹತ್ಯೆ

Pakka News Web • 28 ಜುಲೈ 2026,

ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ ಯುವಕನೋರ್ವ ಹೋಮ್‌ಸ್ಟೇಯಲ್ಲಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಸಂಭವಿಸಿದೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ನಿವಾಸಿ ವೀರೇಶ ಆರ್. ರುದ್ರಪ್ಪ (25) ಮೃತಪಟ್ಟ ಯುವಕ.

ಲಭ್ಯವಾಗಿರುವ ಮಾಹಿತಿಯ ಪ್ರಕಾರ, ವೀರೇಶ ಕಳೆದ ನಾಲ್ಕು ದಿನಗಳ ಹಿಂದೆ ಆಶಾ ಎಂಬವರೊಂದಿಗೆ ಮುರುಡೇಶ್ವರಕ್ಕೆ ಆಗಮಿಸಿ, ಸ್ಥಳೀಯ ಹೋಮ್‌ಸ್ಟೇ ಒಂದರಲ್ಲಿ ತಂಗಿದ್ದರು. ಮಂಗಳವಾರ ಕೊಠಡಿಯ ಫ್ಯಾನ್‌ಗೆ ಬೆಡ್‌ಶೀಟ್‌ನಿಂದ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ತಮ್ಮ ಮಗನ ಸಾವಿನ ಕುರಿತು ಸಂಶಯ ವ್ಯಕ್ತಪಡಿಸಿರುವ ಮೃತನ ತಂದೆ, ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸುವಂತೆ ಮುರುಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250