ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Crime

ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ: ಕಾರು ಸಂಪೂರ್ಣ ಜಖಂ

Pakka News Web • 28 ಜುಲೈ 2026,

ನಗರದ ಕೋಡಿಭಾಗದ ಖಾಫ್ರಿ ದೇವಸ್ಥಾನದ ಬಳಿ ಮಂಗಳವಾರ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಡಿವೈಡರ್ಗೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ವಾಹನ ಸಂಪೂರ್ಣವಾಗಿ ಜಖಂಗೊಂಡಿದೆ.

ಚಿತ್ತಾಕುಲಾ ನಿವಾಸಿ ಪ್ರತೀಕ್ ಕಲ್ಗುಟ್ಕರ್ ಎಂಬುವವರು ಕಾರವಾರದಿಂದ ಚಿತ್ತಾಕುಲಾದತ್ತ ಕಾರಿನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಮಧ್ಯದಲ್ಲಿದ್ದ ಡಿವೈಡರ್ಗೆ ಬಲವಾಗಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆ ಡಿವೈಡರ್ಗೂ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಕಾರವಾರ ನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250