ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

ಬ್ರಾಹ್ಮಣ ಸಮುದಾಯದವರ ಸ್ವಾವಲಂಬನೆಗೆ ಆಸರೆ: ನೇರ ಸಾಲ ಪಡೆಯುವ ಅವಕಾಶ!  

Pakka News Web • 29 ಜುಲೈ 2026,

ಕಾರವಾರ: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ಬಾಂಧವರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ನೆರವಾಗುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ‘ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ’ಯಡಿ ಸಾಲ ಸೌಲಭ್ಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಸಮುದಾಯದ ಜನರು ಗುಡಿ ಕೈಗಾರಿಕೆ, ಸಣ್ಣ ಉದ್ಯಮ, ಹೋಟೆಲ್ ಹಾಗೂ ಕ್ಯಾಟರಿಂಗ್, ವ್ಯಾಪಾರ-ಅಂಗಡಿ, ಟೈಲರಿಂಗ್, ಟ್ಯಾಕ್ಸಿ ಚಾಲನೆ ಹಾಗೂ ಹಸು ಸಾಕಾಣಿಕೆಯಂತಹ ವಿವಿಧ ಆದಾಯ ತರುವಂತಹ ಉದ್ಯೋಗಗಳನ್ನು ಪ್ರಾರಂಭಿಸಲು ಈ ಯೋಜನೆಯಡಿ ಆರ್ಥಿಕ ನೆರವು ದೊರೆಯಲಿದೆ. ವಿಶೇಷವಾಗಿ ಮಹಿಳೆಯರ ಸಬಲೀಕರಣಕ್ಕೆ ಆದ್ಯತೆ ನೀಡಲಾಗಿದ್ದು ಅವರಿಗೆ ಶೇಕಡಾ 33 ರಷ್ಟು ಹಾಗೂ ದಿವ್ಯಾಂಗ ಚೇತನರಿಗೆ ಶೇಕಡಾ 5 ರಷ್ಟು ಮೀಸಲಾತಿಯನ್ನು ಕಾಯ್ದಿರಿಸಲಾಗಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಗಸ್ಟ್ 31 ರ ಸಂಜೆ 5:30 ರೊಳಗಾಗಿ ಮಂಡಳಿಯ ಅಧಿಕೃತ ವೆಬ್‌ಸೈಟ್ (www.ksbdb.karnataka.gov.in) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ಕಾರವಾರದ ಹಬ್ಬುವಾಡಾದ ನ್ಯೂ ಕೆ.ಎಚ್.ಬಿ. ಕಾಲೋನಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 7975633671 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250