ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

State-National

ಧಾರವಾಡದಲ್ಲಿ ಅರ್ಜುನ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ NATA ಪರೀಕ್ಷೆಯಲ್ಲಿ ಭರ್ಜರಿ ಯಶಸ್ಸು

Pakka News Web • 29 ಜುಲೈ 2026,

ಧಾರವಾಡ: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್’ ಐದು ವರ್ಷಗಳ ಬಿ.ಆರ್ಕ್ (B. Arch) ಪದವಿ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರೀಯ ಮಟ್ಟದ ‘ನಾಟಾ’ (NATA) ಪ್ರವೇಶ ಪರೀಕ್ಷೆಯಲ್ಲಿ ಇಲ್ಲಿನ ಅರ್ಜುನ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆ.ಇ.ಇ (JEE), ನೀಟ್ (NEET) ಮತ್ತು ಕೆ.ಸಿ.ಇ.ಟಿ (KCET) ಪರೀಕ್ಷೆಗಳಲ್ಲಿ ಸದಾ ಮುಂಚೂಣಿಯಲ್ಲಿರುವ ಅರ್ಜುನ ಸಂಸ್ಥೆಯ ವಿದ್ಯಾರ್ಥಿಗಳು, ಇದೀಗ ‘ನಾಟಾ’ ಪರೀಕ್ಷೆಯಲ್ಲೂ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ. ವಿದ್ಯಾರ್ಥಿಗಳ ಸತತ ಪರಿಶ್ರಮ ಹಾಗೂ ಉಪನ್ಯಾಸಕ ವೃಂದದ ಸೂಕ್ತ ಮಾರ್ಗದರ್ಶನ ಒಟ್ಟುಗೂಡಿದಾಗ ಇಂತಹ ಶ್ರೇಷ್ಠ ಫಲಿತಾಂಶ ಸಾಧ್ಯವಾಗುತ್ತದೆ ಎಂಬುದಕ್ಕೆ ಈ ಸಾಧನೆಯೇ ಸಾಕ್ಷಿಯಾಗಿದೆ.

ಸಂಸ್ಥೆಯ ವಿದ್ಯಾರ್ಥಿಗಳಾದ ಸ್ವರ್ಣ ಶೆಟ್ಟಮ್ಮನವರ (೧೦೫ ಅಂಕ), ಶ್ರೇಯಾ ಪಾಟೀಲ (೧೦೯ ಅಂಕ) ಹಾಗೂ ಈಶಾಲ ಮುಲ್ಲಾ (೨೯೫ ರ್ಯಾಂಕ್) ಉತ್ತಮ ಅಂಕ ಮತ್ತು ರ್ಯಾಂಕ್ ನೊಂದಿಗೆ ಉತ್ತೀರ್ಣರಾಗಿ ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ. ಅತ್ಯುತ್ತಮ ಸಾಧನೆಗೈದು ಕಾಲೇಜಿನ ಕೀರ್ತಿ ಹೆಚ್ಚಿಸಿದ ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಚಾರ್ಯರು ಹಾಗೂ ಸಕಲ ಸಿಬ್ಬಂದಿ ವರ್ಗದವರು ಮುಕ್ತಕಂಠದಿಂದ ಅಭಿನಂದಿಸಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳ ಮುಂದಿನ ಉನ್ನತ ಶಿಕ್ಷಣ ಹಾಗೂ ಉಜ್ವಲ ಭವಿಷ್ಯಕ್ಕೆ ಹೃದಯಪೂರ್ವಕ ಶುಭ ಹಾರೈಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250