ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Crime

ಲೆನಿನ್ ರಸ್ತೆಯಲ್ಲಿ ಬೆಂಕಿ ಅವಘಡ; ಟಿಫಿನ್ ಕಾರ್ನರ್ ಭಸ್ಮ

Pakka News Web • 3 ಆಗಸ್ಟ್ 2026,

ದಾಂಡೇಲಿ: ನಗರದ ಲೆನಿನ್ ರಸ್ತೆಯಲ್ಲಿರುವ ಅರ್ಪಿತ ಟಿಫಿನ್ ಕಾರ್ನರ್ನಲ್ಲಿ ಸೋಮವಾರ ನಸುಕಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಂಗಡಿ ದಗದಗನೆ ಹೊತ್ತಿ ಉರಿದ ಘಟನೆ ನಡೆದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾಗದ ಕಾರ್ಖಾನೆಯ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು.

ಆದರೆ, ಅಷ್ಟರಲ್ಲೇ ಅಂಗಡಿಯಲ್ಲಿದ್ದ ಅಡುಗೆ ಪರಿಕರಗಳು, ಪೀಠೋಪಕರಣಗಳು ಹಾಗೂ ಇತರೆ ಸಾಮಗ್ರಿಗಳು ಬೆಂಕಿಗಾಹುತಿಯಾಗಿ ಸುಟ್ಟು ಕರಕಲಾಗಿವೆ. ಈ ಅವಘಡದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟ ಸಂಭವಿಸಿದೆ ಎಂದು ಪ್ರಾಥಮಿಕ ಅಂದಾಜು ತಿಳಿಸಿದೆ.

ಘಟನಾ ಸ್ಥಳಕ್ಕೆ ನಗರ ಠಾಣೆಯ ಪಿಎಸ್‌ಐ ಅಮೀನ್ ಅತ್ತಾರ್, ಎಎಸ್‌ಐ ರಾಜಪ್ಪ ದೊಡ್ಮನಿ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಮಹಾದೇವ ಬಳೇಗಾರ, ದಯಾನಂದ ಲೋಂಡಿ, ಸುನೀಲ್ ದುಗ್ಗಾಡೆ, ಚಂದ್ರಶೇಖರ ಪಾಟೀಲ್ ಮತ್ತು ಗೃಹರಕ್ಷಕ ದಳದ ಸಿಬ್ಬಂದಿ ಭೇಟಿ ನೀಡಿ ಅಗ್ನಿಶಾಮಕ ದಳದ ಕಾರ್ಯಾಚರಣೆಗೆ ಸಹಕರಿಸಿದರು. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250