ಭಟ್ಕಳ ತಾಲೂಕಿನಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರಾ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಆಗಸ್ಟ್ 5 ರ ಬೆಳಿಗ್ಗೆ 5 ಗಂಟೆಯಿಂದ ಆಗಸ್ಟ್ 6 ರ ಮಧ್ಯರಾತ್ರಿ 12 ಗಂಟೆಯವರೆಗೆ (ಎರಡು ದಿವಸ) ಭಟ್ಕಳ ತಾಲೂಕಿನಾದ್ಯಂತ ಎಲ್ಲಾ ರೀತಿಯ ಮದ್ಯದ ಅಂಗಡಿ ವೈನ್ ಶಾಪ್ ಮತ್ತು ಬಾರ್ ಗಳನ್ನು ಬಂದ್ ಮಾಡಿ ಹಾಗೂ ಈ ದಿನಗಳಂದು ಭಟ್ಕಳ ತಾಲೂಕಿನಾದ್ಯಂತ ಮದ್ಯ ಸಾಗಾಟ ಹಾಗೂ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ.
