ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

ಜಿಲ್ಲೆಯ ಕೋರ್ಟ್ ಗಳಲ್ಲಿ ನೌಕರಿ ಪಡೆಯಲು ಉತ್ತಮ ಅವಕಾಶ!

Pakka News Web • 7 ಆಗಸ್ಟ್ 2026,

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉತ್ತರ ಕನ್ನಡ, ಕಾರವಾರ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಆದೇಶ-ಜಾರಿಕಾರರು (13) ಹಾಗೂ ಜವಾನ (65) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರವಾರದ ವೆಬೆಸೈಟ್: https://uttarakannada.dcourts.gov.in/notice-category/recruitments/  ಅಥವಾ https://uttarakannada.dcourts.gov.in/online-recruitment/ ಲಿಂಕ್ ಮೂಲಕ ಆ.17 ರಿಂದ ಸೆ.16 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಹುದ್ದೆಗಳ ವರ್ಗೀಕರಣ ಮತ್ತು ಹೆಚ್ಚಿನ ವಿವರಗಳಿಗಾಗಿ ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ಪರಿಶೀಲಿಸಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250