ಸಾಂದರ್ಭಿಕ ಚಿತ್ರ
ರಾಷ್ಟ್ರೀಯ ಹೆದ್ದಾರಿ 66ರ ಕುಮಟಾದ ಬರ್ಗಿಯ ಸರಕಾರಿ ಪ್ರೌಢಶಾಲೆ ಸಮೀಪ ರಸ್ತೆ ದಾಟುತ್ತಿದ್ದ ವೃದ್ಧೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಲೇ ಕೊನೆಯುಸಿರೆಳೆದ ದಾರುಣ ಘಟನೆ ಸೋಮವಾರ ಸಂಭವಿಸಿದೆ.
ಕುಮಟಾ ಶಶಿಹಿಟ್ಲ ನಿವಾಸಿ ದುರ್ಗಿ ಹರಿಕಾಂತ (70) ಮೃ*ತಪಟ್ಟ ಮಹಿಳೆ. ಕುಮಟಾದಿಂದ ಬರ್ಗಿಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಭೇಟಿ ನೀಡಲು ಬಂದಿದ್ದ ಅವರು, ಬಸ್‌ನಿಂದಿ ಇಳಿದು ಪ್ರೌಢ ಶಾಲೆಯ ಬಳಿ ರಸ್ತೆ ದಾಟುತ್ತಿದ್ದರು.

ಈ ವೇಳೆ ಕುಮಟಾ ಕಡೆಯಿಂದ ಗೋಕರ್ಣದತ್ತ ಸಾಗುತ್ತಿದ್ದ ಕಾರು ಭೀಕರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಕಾರಿನಲ್ಲಿದ್ದ ಪ್ರಯಾಣಿಕರು ಸಿದ್ದಾಪುರದಿಂದ ಗೋಕರ್ಣಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಗೋಕರ್ಣ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
