ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

ವಿವಿಧ ಬೇಡಿಕೆಗೆ ಆಗ್ರಹಿಸಿ ಜೈಲ್ ಭರೋ ಹೋರಾಟ

Pakka News Web • 10 ಆಗಸ್ಟ್ 2026,

ಕಾರ್ಮಿಕ ವಿರೋಧಿ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಹಾಗೂ ಜೆಸಿಟಿಯು ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಸೋಮವಾರ ‘ಜೈಲ್ ಭರೋ’ ಹೋರಾಟ ನಡೆಸಲಾಯಿತು.

ಪ್ರತಿಭಟನೆಯ ಭಾಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ 60ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು, ಬಳಿಕ ಬಿಡುಗಡೆಗೊಳಿಸಿದರು. ಈ ಜೈಲ್ ಭರೋ ಪ್ರತಿಭಟನೆಗೂ ಮುನ್ನ ಕಾರವಾರ ನಗರದ ಮಿತ್ರ ಸಮಾಜ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿತ್ತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜೆಸಿಟಿಯು ರಾಜ್ಯ ಘಟಕದ ಕಾರ್ಯದರ್ಶಿ ಸುನಂದಾ ಅವರು, ದೇಶದಲ್ಲಿ ಬ್ರಿಟಿಷರ ಕಾಲದ ದಬ್ಬಾಳಿಕೆ ಮರುಕಳಿಸಿದ್ದು, ರೈತರ ಭೂಸ್ವಾಧೀನ ಪ್ರಕ್ರಿಯೆಗಳು ಅವಿಶ್ರಾಂತವಾಗಿ ನಡೆಯುತ್ತಿವೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಶೇಕಡಾ 90ರಷ್ಟು ಜನಸಂಖ್ಯೆಯನ್ನು ಹೊಂದಿರುವ ದುಡಿಯುವ ವರ್ಗದ ಹಕ್ಕುಗಳನ್ನು ಕಸಿಯುವ ಕೆಲಸವಾಗುತ್ತಿದ್ದು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಪಾಲಿಗೆ ಮರಣ ಶಾಸನವಾಗಿ ಪರಿಣಮಿಸಿವೆ ಎಂದು ಅವರು ದೂರಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣ ಬಣ್ಣದ ಮಾತುಗಳ ಮೂಲಕ ಜನರನ್ನು ಮರುಳು ಮಾಡುತ್ತಾ, ರೈತರು, ಕಾರ್ಮಿಕರು, ಮಕ್ಕಳು ಹಾಗೂ ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳನ್ನು ಕಸಿಯುತ್ತಿದ್ದಾರೆ ಎಂದು ಅವರು ಗಂಭೀರವಾಗಿ ಆರೋಪಿಸಿದರು.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250