ಪ್ರಧಾನ ಮಂತ್ರಿ ಕಿಸಾನ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಕೇಂದ್ರ ಸರ್ಕಾರದಿಂದ ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೂ. 2 ಸಾವಿರಂತೆ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟೂ ರೂ. 6 ಸಾವಿರ ಸಹಾಯಧನವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ.
ಈ ಯೋಜನೆಯಡಿ ಸಹಾಯಧನ ಪಡೆಯಲು ಪ್ರತಿ ವರ್ಷವೂ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಇ-ಕೆವೈಸಿ ಪೂರ್ಣಗೊಳಿಸಲು ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಹಾಗೂ ಮುಖ ಗುರುತಿಸುವಿಕೆ ಆಧಾರಿತ ಇ-ಕೆವೈಸಿ ಎಂಬ ಎರಡು ವಿಧಾನಗಳಿವೆ.
ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸಿಕೊಳ್ಳಲು ರೈತರು ಹತ್ತಿರದ ಗ್ರಾಹಕ ಸೇವಾ ಕೇಂದ್ರ, ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಕೇಂದ್ರಕ್ಕೆ ತೆರಳಿ ಆಧಾರ ಕಾರ್ಡ್ ಅಥವಾ ಆಧಾರ ಸಂಖ್ಯೆ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ. ಮುಖ ಗುರುತಿಸುವಿಕೆ ಆಧಾರಿತ ಇ-ಕೆವೈಸಿಯನ್ನು ವಿಎನ್ಓ ಆಪ್ ಮೂಲಕ ಮಾಡಿಸಿಕೊಳ್ಳಬೇಕು.
ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಫಲಾನುಭವಿಗಳ ಇ-ಕೆವೈಸಿ ಮಾಡಿಸುವುದು ಬಾಕಿ ಇದ್ದು, ರೈತರು ಕಡ್ಡಾಯವಾಗಿ ಬಯೋಮೆಟ್ರಿಕ ಆಧಾರಿತ ಅಥವಾ ಮೊಬೈಲ್ ಆಪ್ ಮೂಲಕ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಹಾಯಧನ ಪಡೆಯಲು ಇ-ಕೆವೈಸಿ ಕಡ್ಡಾಯ!
