ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Crime

ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾ*ವು

Pakka News Web • 20 ಆಗಸ್ಟ್ 2026,

ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕುಮಟಾ ರಾಷ್ಟ್ರೀಯ ಹೆದ್ದಾರಿ 66ರ ಬೆಟ್ಕುಳಿ ಸಮೀಪ ನಡೆದಿದೆ.

ಮೃತರನ್ನು ಗೋಕರ್ಣದ ಮೇಲಿನಕೇರಿ ನಿವಾಸಿ ಲತೀಶ್ ಗೌಡ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿದ್ದ ನಾಗರಾಜ್ ಗೌಡ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು 108 ಆಂಬ್ಯುಲೆನ್ಸ್ ಮೂಲಕ ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರೂ ಗೋಕರ್ಣದ ಮೇಲಿನಕೇರಿ ನಿವಾಸಿಗಳು ಎಂದು ತಿಳಿದು ಬಂದಿದೆ.

ಲತೀಶ್ ಗೌಡ ಹಾಗೂ ನಾಗರಾಜ್ ಗೌಡ ಅವರು ಬೈಕ್‌ನಲ್ಲಿ ಕುಮಟಾ ಕಡೆಯಿಂದ ಗೋಕರ್ಣದತ್ತ ತೆರಳುತ್ತಿದ್ದರು. ಈ ವೇಳೆ ಬೆಟ್ಕುಳಿ ಸಮೀಪ ಅದೇ ದಿಕ್ಕಿನಲ್ಲಿ ಸಾಗುತ್ತಿದ್ದ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಲತೀಶ್ ಗೌಡ ಸ್ಥಳದಲ್ಲೇ ಮೃತಪಟ್ಟಿದ್ದು, ನಾಗರಾಜ್ ಗೌಡ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ಮಾಹಿತಿ ತಿಳಿದು ಗೋಕರ್ಣ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ವಾಹನ ಹಾಗೂ ಚಾಲಕನ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದು, ಘಟನೆ ಕುರಿತು ತನಿಖೆ ಮುಂದುವರಿದಿದೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250