ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Crime

ವಿದ್ಯಾರ್ಥಿ ಆತ್ಮ*ಹತ್ಯೆ; ಪ್ರಕರಣ ದಾಖಲು

Pakka News Web • 20 ಆಗಸ್ಟ್ 2026,

ಶಿರಸಿ: ಯಾವುದೋ ವಿಚಾರವನ್ನು ಮನಸ್ಸಿಗೆ ಹಚ್ಚಿಕೊಂಡು ವಿದ್ಯಾರ್ಥಿಯೊಬ್ಬ ಆತ್ಮ*ಹತ್ಯೆಗೆ ಶರಣಾದ ಘಟನೆ ಶಿರಸಿ ನಗರದ ಬನವಾಸಿ ರಸ್ತೆಯ ದೊಡ್ಡಲುಬಾವಿ ಕ್ರಾಸ್ ಸಮೀಪ ನಡೆದಿದೆ.

ಸಾಗರ ತಾಲೂಕಿನ ಇಂದುಧರ ದೇವೇಂದ್ರಪ್ಪ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ನಗರದ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ. ಇಂದುಧರ ಅವರು ಹುಬ್ಬಳ್ಳಿ ರಸ್ತೆಯ ಕಾಲೇಜೊಂದರಲ್ಲಿ ಫೈರ್ ಆ್ಯಂಡ್ ಸೇಫ್ಟಿ ಮ್ಯಾನೇಜ್‌ಮೆಂಟ್ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

ಘಟನೆ ಕುರಿತು ಮಾಹಿತಿ ತಿಳಿದು ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪಿಎಸ್‌ಐ ಬಸವರಾಜ ಕನಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250