ಅಕ್ರಮವಾಗಿ ಮದ್ಯ ಸಂಗ್ರಹಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಿದ್ಧತೆ ನಡೆಸಿದ್ದ ಆರೋಪದ ಮೇಲೆ ಕಾರವಾರ ಗ್ರಾಮೀಣ ಠಾಣೆ ಪೊಲೀಸರು ಚಾಲಕನೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.
ತಾಲೂಕಿನ ತೋಡೂರು ಸೀಬರ್ಡ್ ಕಾಲೋನಿ ನಿವಾಸಿ ದರ್ಶನ ಹೇಮಾನಂದ ನಾಯ್ಕ (28) ಬಂಧಿತ ಆರೋಪಿ. ಗುರುವಾರ ರಾತ್ರಿ ಅಕ್ರಮ ಮದ್ಯ ಮಾರಾಟದ ಕುರಿತು ಖಚಿತ ಮಾಹಿತಿ ಆಧರಿಸಿ ಕಾರವಾರ ಗ್ರಾಮೀಣ ಠಾಣೆ ಪಿಎಸ್ಐ ನೇಹಾಲ್ ಖಾನ್ ನೇತೃತ್ವದ ತಂಡ ದಾಳಿ ನಡೆಸಿದೆ.
ದಾಳಿ ವೇಳೆ ಬ್ಲೆಂಡರ್ಸ್ ಪ್ರೈಡ್ ಹಾಗೂ ಟೀಚರ್ಸ್ ಬ್ರಾಂಡ್ನ ಒಟ್ಟು 14 ಮದ್ಯದ ಬಾಟಲಿಗಳು ಪತ್ತೆಯಾಗಿದ್ದು, ಅವುಗಳ ಅಂದಾಜು ಮೌಲ್ಯ ₹23,140 ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರವಾನಗಿ ಇಲ್ಲದೆ ಮದ್ಯವನ್ನು ಸಂಗ್ರಹಿಸಿ ಮಾರಾಟಕ್ಕೆ ಮುಂದಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಕಾರವಾರ ಗ್ರಾಮೀಣ ಠಾಣೆಯಲ್ಲಿ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
