ಸೆಪ್ಟೆಂಬರ್ 11, 2026
ಶುಕ್ರವಾರ

ನಮ್ಮನ್ನು ಅನುಸರಿಸಿ

Crime

ಬೃಹತ್ ರಸ್ತೆ ಗುಂಡಿಗೆ ದ್ವಿಚಕ್ರ ವಾಹನ ಬಡಿದು ಮಹಿಳೆ ಗಾಯ

Pakka News Web • 24 ಆಗಸ್ಟ್ 2026,

ಬನವಾಸಿ:ರಸ್ತೆ ತಿರುವಿನಲ್ಲಿದ್ದ ಬೃಹತ್ ಗುಂಡಿ ದ್ವಿಚಕ್ರ ವಾಹನಕ್ಕೆ ಅಪಾಯ ತಂದ ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ಬನವಾಸಿ ಸಮೀಪದ ಕಡಗೋಡು ಕ್ರಾಸ್ ಬಳಿ ಸೋಮವಾರ ರಾತ್ರಿ ನಡೆದಿದೆ.

ಬನವಾಸಿಯಿಂದ ದಾಸನಕೊಪ್ಪ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ರಾತ್ರಿ ಸುಮಾರು 8 ಗಂಟೆಗೆ ಈ ಘಟನೆ ಸಂಭವಿಸಿದೆ. ತಿರುವಿನಲ್ಲಿದ್ದ ಗುಂಡಿ ಕತ್ತಲಿನಲ್ಲಿ ಗೋಚರಿಸದೆ ವಾಹನ ಅದರೊಳಗೆ ಬಿದ್ದಿದೆ. ವಾಹನದ ನಿಯಂತ್ರಣ ತಪ್ಪಿದ ರಭಸಕ್ಕೆ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಮಹಿಳೆಗೆ ನೆರವು ನೀಡಿದ್ದಾರೆ. ಬಳಿಕ ಆಂಬ್ಯುಲೆನ್ಸ್ ಮೂಲಕ ಅವರನ್ನು ಶಿರಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಬನವಾಸಿ–ದಾಸನಕೊಪ್ಪ ರಸ್ತೆಯಲ್ಲಿ ಹಲವು ಕಡೆಗಳಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ದೊಡ್ಡ ಗಾತ್ರದ ಗುಂಡಿಗಳು ವಾಹನ ಸವಾರರಿಗೆ ಸವಾಲಾಗಿ ಪರಿಣಮಿಸಿವೆ. ಅದರಲ್ಲೂ ರಾತ್ರಿ ವೇಳೆ ಗುಂಡಿಗಳು ಕಾಣಿಸದ ಕಾರಣ ಅಪಘಾತದ ಅಪಾಯ ಹೆಚ್ಚಾಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ಸಂಚರಿಸುವವರಷ್ಟೇ ಅಲ್ಲದೆ, ರಸ್ತೆಯ ಸ್ಥಿತಿಯ ಅರಿವಿಲ್ಲದೆ ಬರುವ ವಾಹನ ಸವಾರರೂ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಸಣ್ಣಪುಟ್ಟ ದುರಸ್ತಿಗೆ ಸೀಮಿತವಾಗದೆ ರಸ್ತೆಯ ಅಪಾಯಕಾರಿ ಗುಂಡಿಗಳನ್ನು ಗುರುತಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು. ಮತ್ತೊಂದು ಅಪಘಾತ ಸಂಭವಿಸುವ ಮುನ್ನವೇ ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250