ಜಾನಪದ ಕಲಾವಿದರು, ವಿದ್ವಾಂಸರು, ವಾದ್ಯಗಾರರು, ಬುಡಕಟ್ಟು ಜನರನ್ನೊಳಗೊಂಡಂತೆ “ಜಾನಪದ ಸಂಗಮ” ಹೆಸರಿನ ಕಾರ್ಯಕ್ರಮವನ್ನು ಗಿರಿಜನ ಉಪಯೋಜನೆ ಅಡಿ ಸರ್ಕಾರವು ಹೊಸಯೋಜನೆಯಾಗಿ ಘೋಷಿಸಿದೆ.
ಗಿರಿಜನ ಉಪಯೋಜನೆಯಡಿ ರಾಜ್ಯದ 4 ವಿಭಾಗಗಳಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾಪ್ರಕಾರದ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ 16 ರಿಂದ 40 ರೊಳಗಿನ ವಯೋಮಾನದ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅಕಾಡೆಮಿಯ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ ಸಿ ರಸ್ತೆ, ಬೆಂಗಳೂರು ಇವರಿಗೆ ಸಪ್ಟೆಂಬರ್ 16 ರೊಳಗೆ ತಲುಪುವಂತೆ ಕಳುಹಿಸಬೇಕು. ಅರ್ಜಿ ನಮೂನೆಯು ಅಕಾಡೆಮಿ ವೆಬ್ಸೈಟ್ https://janapada.karnataka.gov.in/ ನಲ್ಲಿ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ಇ –ಮೇಲ್ registrar.janapada@gmail.com ಅಥವಾ ದೂ.ಸಂ: 080-22215509 ನ್ನು ಸಂಪರ್ಕಿಸಬಹುದು. ಶಿಬಿರಾರ್ಥಿಗಳ ಆಯ್ಕೆಯಲ್ಲಿ ಅಕಾಡೆಮಿಯ ತೀರ್ಮಾನವೆ ಅಂತಿಮವಾಗಿರುತ್ತದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ರೆಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
