ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

ಗ್ರಾಮೀಣ ಭಾಗದಲ್ಲಿ 43 ಹುದ್ದೆ ಖಾಲಿ: ಕೂಡಲೇ ಅರ್ಜಿ ಸಲ್ಲಿಸಿ!

Pakka News Web • 26 ಆಗಸ್ಟ್ 2026,

ಅಂಚೆ ಇಲಾಖೆಯ ಕಾರವಾರ ವಿಭಾಗದಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಸೇರಿದಂತೆ ಒಟ್ಟು 43 ಗ್ರಾಮೀಣ ಅಂಚೆ ಸೇವಕ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 40 ವರ್ಷ ವಯೋಮಿತಿಯೊಳಗಿರಬೇಕು ಹಾಗೂ ಎಸ್ಎಸ್ಎಲ್ಸಿ (10ನೇ ತರಗತಿ) ಉತ್ತೀರ್ಣರಾಗಿರಬೇಕು. ಜೊತೆಗೆ 10ನೇ ತರಗತಿಯಲ್ಲಿ ಕನ್ನಡವನ್ನು ಒಂದು ವಿಷಯವನ್ನಾಗಿ ಅಭ್ಯಾಸ ಮಾಡಿರಬೇಕಾದುದು ಕಡ್ಡಾಯವಾಗಿದೆ. ಈ ನೇಮಕಾತಿಗೆ ಯಾವುದೇ ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಇರುವುದಿಲ್ಲ; ಕೇವಲ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಅರ್ಹ ಅಭ್ಯರ್ಥಿಗಳು ತಮ್ಮ ಎಸ್ಎಸ್ಎಲ್ಸಿ ಅಂಕಪಟ್ಟಿ, ಭಾವಚಿತ್ರ ಹಾಗೂ ಸಹಿಯನ್ನು ನಿಗದಿತ ನಮೂನೆಯಲ್ಲಿ ಸ್ಕ್ಯಾನ್ ಮಾಡಿಕೊಂಡು ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕವೇ ಆನ್ಲೈನ್ನಲ್ಲಿ ಅಪ್ಲೋಡ್ ಮಾಡಬೇಕು. ಆನ್ಲೈನ್ ನೋಂದಣಿಗೆ ಆಗಸ್ಟ್ 31 ರಿಂದ ಸೆಪ್ಟೆಂಬರ್ 19 ರವರೆಗೆ ಅವಕಾಶವಿದ್ದು, ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 21 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಕೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ https://indiapost.gov.in/gdsonlineengagement ಗೆ ಭೇಟಿ ನೀಡಬಹುದು. ದೇಶಾದ್ಯಂತ ಈ ನೇಮಕಾತಿ ಪ್ರಕ್ರಿಯೆ ಏಕಕಾಲದಲ್ಲಿ ನಡೆಯುತ್ತಿರುವುದರಿಂದ, ಅರ್ಹ ಸ್ಥಳೀಯ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕಾರವಾರ ವಿಭಾಗದ ಅಂಚೆ ಅಧೀಕ್ಷಕರಾದ ಹೂವಪ್ಪ ಜಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250