ಕಾರವಾರ: ಕಾರವಾರ–ಅಂಕೋಲ ಕ್ಷೇತ್ರದ ಶಾಸಕ ಸತೀಶ್ ಸೈಲ್ ಅವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಈದ್ ಮಿಲಾದ್ ಉನ್ನಬಿ ಪ್ರಯುಕ್ತ ಸೌಹಾರ್ದತೆಯ ಸಂದೇಶ ಸಾರಿದರು.
ನಗರದ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡವರಿಗೆ ತಂಪು ಪಾನೀಯ ಹಾಗೂ ಸಿಹಿತಿಂಡಿ ವಿತರಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಯುವ ಕಾಂಗ್ರೆಸ್ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಶುಭಾಶಯ ಕೋರಿದರು.
ಹಬ್ಬದ ಸಂದರ್ಭದಲ್ಲಿ ಪರಸ್ಪರ ಗೌರವ, ಸಹೋದರತ್ವ ಹಾಗೂ ಸೌಹಾರ್ದತೆಯನ್ನು ಸಾರುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿವಿಧ ಸಮುದಾಯಗಳ ನಡುವೆ ಸ್ನೇಹ ಮತ್ತು ಸಾಮರಸ್ಯ ಬೆಳೆಸುವ ಸಂದೇಶದೊಂದಿಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಈದ್ ಮಿಲಾದ್ ಆಚರಣೆಯಲ್ಲಿ ಪಾಲ್ಗೊಂಡರು.
