ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Crime

9ನೇ ತರಗತಿ ವಿದ್ಯಾರ್ಥಿ ನಾಪತ್ತೆ!

Pakka News Web • 29 ಆಗಸ್ಟ್ 2026,

ಕಾರವಾರ: ಇಲ್ಲಿನ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ 14 ವರ್ಷ 11 ತಿಂಗಳ ಬಾಲಕ ಕೇಸರ ಪ್ರಶಾಂಶ ಬಂಕಾಪೂರ ಎಂಬಾತ ಕಾಣೆಯಾಗಿದ್ದು, ಆತನ ಪತ್ತೆಗೆ ಪೊಲೀಸರು ಸಾರ್ವಜನಿಕರ ನೆರವು ಕೋರಿದ್ದಾರೆ.

ಕಳೆದ ಎರಡು ವರ್ಷಗಳಿಂದ ಕಾರವಾರದ ಬಿ.ಸಿ.ಎಂ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ ಈ ಬಾಲಕನು, ಆಗಸ್ಟ್ 27 ರಂದು ಸಂಜೆ 5.30ಕ್ಕೆ ಶಾಲಾ ಸಮಯ ಮುಗಿದ ಬಳಿಕ ಹಾಸ್ಟೆಲ್‌ಗೂ ಮರಳದೆ, ಮನೆಗೂ ತಲುಪದೆ ನಾಪತ್ತೆಯಾಗಿದ್ದಾನೆ.

ಹುಡುಗನ ಚಹರೆ ವಿವರ: ಸುಮಾರು 5.2 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹಾಗೂ ದುಂಡು ಮುಖ ಹೊಂದಿರುವ ಈತ ಕನ್ನಡ ಭಾಷೆ ಮಾತನಾಡುತ್ತಾನೆ. ಕಾಣೆಯಾಗುವ ಸಮಯದಲ್ಲಿ ಬಿಳಿ ಬಣ್ಣದ ಶರ್ಟ್ ಹಾಗೂ ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದನು.

ಈ ಚಹರೆಯುಳ್ಳ ಬಾಲಕನ ಕುರಿತು ಯಾವುದೇ ಮಾಹಿತಿ ಲಭ್ಯವಾದಲ್ಲಿ ಸಾರ್ವಜನಿಕರು ತಕ್ಷಣವೇ ಕಾರವಾರ ಪೊಲೀಸ್ ಕಂಟ್ರೋಲ್ ರೂಂ (9480805200), ಕಾರವಾರ ಮಹಿಳಾ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ (8277987514) ಅಥವಾ ಮಹಿಳಾ ಠಾಣೆಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (8277987555) ಅವರನ್ನು ಸಂಪರ್ಕಿಸುವಂತೆ ಕಾರವಾರ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250