ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Crime

ಕಾರು-ಬೈಕ್ ಡಿಕ್ಕಿ; ಯುವಕನಿಗೆ ಗಾಯ!

Pakka News Web • 1 ಸೆಪ್ಟೆಂ 2026,

ಶಿರಸಿ: ನಗರದ ಮಹಾಸತಿ ಸರ್ಕಲ್ ಸಮೀಪ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಯುವಕನೊಬ್ಬ ಗಾಯಗೊಂಡ ಘಟನೆ ನಡೆದಿದೆ.

ಚಿಪಗಿ ಗ್ರಾಮದ ಮೇಲಿನ ಎಸಳೆ ನಿವಾಸಿ ಗುಡದಯ್ಯ ಬೀರಪ್ಪ ಕರ್ಜಗಿ (23) ಗಾಯಗೊಂಡ ಯುವಕ ಎಂದು ಗುರುತಿಸಲಾಗಿದೆ. ಅವರು ಬೈಕ್‌ನಲ್ಲಿ ಮಹಾಸತಿ ಸರ್ಕಲ್ ಮಾರ್ಗವಾಗಿ ಯಲ್ಲಾಪುರ ನಾಕಾ ಕಡೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಶಿರಸಿ-ಯಲ್ಲಾಪುರ ರಾಜ್ಯ ಹೆದ್ದಾರಿಯ ಮಹಾಸತಿ ಸರ್ಕಲ್ ಸಮೀಪ ಎಪಿಎಂಸಿ ಕಡೆಯಿಂದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗುಡದಯ್ಯ ಕರ್ಜಗಿ ಗಾಯಗೊಂಡಿದ್ದಾರೆ.

ಕಾರು ಚಾಲಕ ಖುರ್ಸೆ ಕಂಪೌಂಡ್ ನಿವಾಸಿ ಶಿವಾಜಿ ಕೃಷ್ಣಪ್ಪ ಮಡಿವಾಳ (43) ಅವರು ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಅಪಘಾತಕ್ಕೆ ಕಾರಣರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಸಂಬಂಧ ಶಿರಸಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250