ಕಂಟೇನರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟ ಘಟನೆ ಕುಮಟಾದ ಎಲ್‌ಐಸಿ ಕಚೇರಿ ಸಮೀಪ ನಡೆದಿದೆ.
ಮೃತರನ್ನು ವಿವೇಕ್ ಶೆಟ್ಟಿ (45) ಎಂದು ಗುರುತಿಸಲಾಗಿದೆ. ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ವಿವೇಕ್ ಶೆಟ್ಟಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
