ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

Job: ಖಾಲಿ ಇರುವ ಹುದ್ದೆಗೆ ನೇರ ಸಂದರ್ಶನ!

Pakka News Web • 10 ಸೆಪ್ಟೆಂ 2026,

ಕಾರವಾರ:ಯೋಜನಾ ಉದ್ಯೋಗ ವಿನಿಮಯ ಕಚೇರಿ, ಕಾರವಾರ ಇವರ ವತಿಯಿಂದ ಪದವಿ ಹೊಂದಿದ ಅಭ್ಯರ್ಥಿಗಳಿಗೆ ಖಾಸಗಿ ಕಂಪನಿಯಾದ ಮುತ್ತೂಟ್ ಫಿನ್ಕಾರ್ಪ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸೆ.11 ರಂದು ನೇರ ಸಂದರ್ಶನವನ್ನು ಯೋಜನಾ ಉದ್ಯೋಗ ವಿನಿಮಯ ಕಚೇರಿ, ಶ್ರೀಮತಿ ಪ್ರೇಮಾಬಾಯಿ ರಾಯ್ಕರ ಬಿಲ್ಡಿಂಗ್, ಪಂಜಾಬ್ ನ್ಯಾಶನಲ್ ಬ್ಯಾಂಕ್ ಹತ್ತಿರ, ಸಿವಿಲ್ ಕೋರ್ಟ್ ರಸ್ತೆ, ಕಾರವಾರದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಶನದಲ್ಲಿ ವಯೋಮಿತಿ 18 ರಿಂದ 33 ವರ್ಷದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಉದ್ಯೋಗದ ಸ್ಥಳ ಕಾರವಾರ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ರೆಸ್ಯೂಮ್ ಪ್ರತಿಯೊಂದಿಗೆ, ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಳಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ಮೊ.ಸಂ: 8310044796 ಅಥವಾ ಕಚೇರಿ ದೂ.ಸಂ: 08382-226386 ನ್ನು ಸಂಪರ್ಕಿಸುವAತೆ ಯೋಜನಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250