ಸೆಪ್ಟೆಂಬರ್ 11, 2026
ಶುಕ್ರವಾರ

ನಮ್ಮನ್ನು ಅನುಸರಿಸಿ

Uttara-Kannada

ಸ್ಥಳೀಯ ಮಟ್ಟದಲ್ಲೇ ಪ್ರವೇಶಾತಿಗೆ ಅವಕಾಶ: ಶಾಸಕ ಸೈಲ್ ಮಾಹಿತಿ

Pakka News Web • 11 ಸೆಪ್ಟೆಂ 2026,

ಕಾರವಾರ: ತಾಲೂಕಿನ ಮಾಜಾಳಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ (ಬಿ.ಇ.) ಕಾಲೇಜಿನಲ್ಲಿ ಅಂತಿಮ ಸುತ್ತಿನ ಆನ್‌ಲೈನ್ ಕೌನ್ಸಿಲಿಂಗ್ ನಂತರ ಖಾಲಿ ಉಳಿದಿರುವ ಸೀಟುಗಳಿಗೆ ಕಾಲೇಜು ಹಂತದಲ್ಲೇ ನಿಯಮಾನುಸಾರ ವಿದ್ಯಾರ್ಥಿಗಳಿಗೆ ನೇರ ಪ್ರವೇಶಾತಿ ನೀಡಲು ಸರ್ಕಾರದ ತಾಂತ್ರಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ ಎಂದು ಶಾಸಕ ಹಾಗೂ ಕೆಎಸ್‌ಎಂಸಿಎ ಅಧ್ಯಕ್ಷ ಸತೀಶ್‌ ಕೃಷ್ಣ ಸೈಲ್‌ ತಿಳಿಸಿದ್ದಾರೆ.

ಖಾಲಿ ಇರುವ ಸೀಟುಗಳನ್ನು ಅರ್ಹ ವಿದ್ಯಾರ್ಥಿಗಳಿಗೆ ‌ ಸ್ಥಳೀಯ ಮಟ್ಟದಲ್ಲಿ ಭರ್ತಿ ಮಾಡಲು ಕಾಲೇಜಿನ ಪ್ರಾಂಶುಪಾಲರಿಗೆ ಅಧಿಕಾರ ನೀಡಲಾಗಿದ್ದು, ಸಿಇಟಿ ಪರೀಕ್ಷೆ ಬರೆದಿರುವ ಆಸಕ್ತ ವಿದ್ಯಾರ್ಥಿಗಳು ಕಾಲೇಜನ್ನು ನೇರವಾಗಿ ಸಂಪರ್ಕಿಸಿ ಈ ಸುವರ್ಣಾವಕಾಶದ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250