ಅಕ್ಟೋಬರ್ 6, 2026
ಮಂಗಳವಾರ

ನಮ್ಮನ್ನು ಅನುಸರಿಸಿ

Crime

ರಥಬೀದಿ ಮನೆಯಲ್ಲಿ ಚಿನ್ನಾಭರಣ ಕಳವು: ಆರೋಪಿ ಬಂಧನ

Pakka News Web • 18 ಸೆಪ್ಟೆಂ 2026,

ಗೋಕರ್ಣ: ಮನೆಯವರು ಹಾಗೂ ಅತಿಥಿಗಳು ನಿದ್ರೆಯಲ್ಲಿದ್ದ ವೇಳೆ ಕೋಣೆಯ ಬೀಗ ತೆಗೆದು ಸುಮಾರು 13 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣವನ್ನು ಗೋಕರ್ಣ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಕಳೆದ ಮೇ ತಿಂಗಳಲ್ಲಿ ಗೋಕರ್ಣದ ರಥಬೀದಿಯ ಮನೆಯೊಂದರಲ್ಲಿ ಈ ಕಳವು ನಡೆದಿತ್ತು. ರಾತ್ರಿ ವೇಳೆ ಮನೆಯವರು ಹಾಗೂ ಆಗಮಿಸಿದ್ದ ಅತಿಥಿಗಳು ಮಲಗಿದ್ದ ಸಂದರ್ಭದಲ್ಲಿ ಕೋಣೆಯಲ್ಲಿದ್ದ ವ್ಯಾನಿಟಿ ಬ್ಯಾಗ್‌ನಿಂದ ಸುಮಾರು 80 ಗ್ರಾಂ ತೂಕದ ಚಿನ್ನಾಭರಣವನ್ನು ಕಳವು ಮಾಡಲಾಗಿತ್ತು. 

ಘಟನೆಗೆ ಸಂಬಂಧಿಸಿದಂತೆ ಮಹಾಬಲೇಶ್ವರ ಗಣಪತಿ ತಾಮ್ರಗೌರಿ ಅವರು ಗೋಕರ್ಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ಕೈಗೊಂಡ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀಧರ್ ಎಸ್.ಆರ್. ನೇತೃತ್ವದ ವಿಶೇಷ ತಂಡ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು ಪತ್ತೆಹಚ್ಚಿದೆ. ಬಂಧಿತನನ್ನು ಭಟ್ಕಳ ತಾಲೂಕಿನ ಹೆಬ್ಬೆ ಗ್ರಾಮದ ಪರಮೇಶ್ವರ ಮಾದೇವ ನಾಯ್ಕ (48) ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಬಂಧಿತ ಆರೋಪಿ ಈ ಹಿಂದೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದು, ಒಟ್ಟು 33 ಪ್ರಕರಣಗಳಿಗೆ ಸಂಬಂಧಿಸಿದಂತೆ ಹೆಸರು ಕೇಳಿಬಂದಿದೆ. ವಿವಿಧ ಪ್ರಕರಣಗಳಲ್ಲಿ ಸುಮಾರು 10 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ ಎಂದು ತಿಳಿದು ಬಂದಿದೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250