ಅಕ್ಟೋಬರ್ 27, 2026
ಮಂಗಳವಾರ

ನಮ್ಮನ್ನು ಅನುಸರಿಸಿ

Uttara-Kannada

ವಿಜೃಂಭಣೆಯಿಂದ ಗಣೇಶೋತ್ಸವ ಸಂಪನ್ನ

Pakka News Web • 19 ಸೆಪ್ಟೆಂ 2026,

ದಾಂಡೇಲಿ: ನಿರ್ಮಲ ನಗರದ ಶ್ರೀ ವಿಘ್ನೇಶ್ವರ ಯುವಕ ಮಂಡಳಿಯ ವತಿಯಿಂದ ಗಣೇಶೋತ್ಸವವನ್ನು ಗುರು-ಹಿರಿಯರ ಸಮ್ಮುಖದಲ್ಲಿ ಭಕ್ತಿಭಾವ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು.
ಗುರು-ಹಿರಿಯರ ಸಮ್ಮುಖದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿಗೆ ವಿಶೇಷ ಪೂಜೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸಣ್ಣ ಮಕ್ಕಳಿಗಾಗಿ ಮನರಂಜನಾ ಕಾರ್ಯಕ್ರಮಗಳು ಹಾಗೂ ದಾಂಡೇಲಿಯ ಮಂಜುಳಾ ಗಾನ ಮೆಲೋಡೀಸ್ ವತಿಯಿಂದ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಐದು ದಿನಗಳ ಉತ್ಸವದ ಬಳಿಕ ಗಣಪತಿ ಮೂರ್ತಿಯನ್ನು ಭಕ್ತರು ಹಾಗೂ ಯುವಕ ಮಂಡಳಿಯ ಸದಸ್ಯರು ಭವ್ಯ ಮೆರವಣಿಗೆಯ ಮೂಲಕ ಕೊಂಡೊಯ್ದು, ಸಡಗರ-ಸಂಭ್ರಮದಿಂದ ವಿಸರ್ಜನೆ ಮಾಡಿದರು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡಿದ್ದರು.
ಗಣೇಶೋತ್ಸವವು ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ಯಶಸ್ವಿಯಾಗಿ ಸಂಪನ್ನಗೊಂಡಿತು.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250