ಅಕ್ಟೋಬರ್ 25, 2026
ಭಾನುವಾರ

ನಮ್ಮನ್ನು ಅನುಸರಿಸಿ

Crime

ಇಸ್ಪೀಟ್ ಜೂಜಾಟ; ಐವರು ವಶಕ್ಕೆ

Pakka News Web • 21 ಸೆಪ್ಟೆಂ 2026,

ಯಲ್ಲಾಪುರ: ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿ ಕಟ್ಟಿಕೊಂಡು ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಯಲ್ಲಾಪುರ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿರುವ ಘಟನೆ ಯಲ್ಲಾಪುರ ಪಟ್ಟಣದ ಮಂಜುನಾಥ ನಗರದಲ್ಲಿ ನಡೆದಿದೆ.

ದಶರಥ ಮಾಚನವರ, ಗಣೇಶ ಕಟ್ಟಿಮನಿ, ರಾಜೇಶ ಮೊದಲಿಯರ, ಮಂಜುನಾಥ ಬೋವಿವಡ್ಡರ, ಜಾನ್ಸನ್ ಬಂಧಿತರಾಗಿದ್ದಾರೆ.

ಮಂಜುನಾಥ ನಗರದ ಸಹ್ಯಾದ್ರಿ ಕೋ-ಆಪರೇಟಿವ್ ಸೊಸೈಟಿ ಹಿಂಭಾಗದ ಖಾಲಿ ಜಾಗದಲ್ಲಿ ಸೆ.20ರಂದು ಸಂಜೆ 6 ಗಂಟೆ ಸುಮಾರಿಗೆ ಇಸ್ಪೀಟ್ ಎಲೆಗಳ ಮೇಲೆ ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಟ ನಡೆಯುತ್ತಿರುವ ಮಾಹಿತಿ ಪೊಲೀಸರಿಗೆ ದೊರೆತಿತ್ತು. ಇದರ ಆಧಾರದ ಮೇಲೆ ಪೊಲೀಸರು ಹಾಗೂ ಪಂಚರು ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ಆರೋಪಿಗಳಿಂದ ಒಟ್ಟು 4,050 ನಗದು ಹಣ ಹಾಗೂ ಜೂಜಾಟಕ್ಕೆ ಬಳಸಿದ್ದ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಪೈಕಿ ಐವರನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250