ಅಕ್ಟೋಬರ್ 27, 2026
ಮಂಗಳವಾರ

ನಮ್ಮನ್ನು ಅನುಸರಿಸಿ

Uttara-Kannada

ನೂರು ರೂ. ಪಾವತಿಸಿ ಮನೆ ಬಾಗಿಲಿಗೆ ಬರುತ್ತೆ ಜನನ/ಮರಣ ಪ್ರಮಾಣ ಪತ್ರ!

Pakka News Web • 24 ಸೆಪ್ಟೆಂ 2026,

ಕಾರವಾರ:ಅಂಚೆ ಇಲಾಖೆ ಕಾರವಾರ ವಿಭಾಗ ಹಾಗೂ ನಗರಸಭೆ ಸಹಯೋಗದಲ್ಲಿ ಜನನ ಹಾಗೂ ಮರಣ ಪ್ರಮಾಣ ಪತ್ರಗಳನ್ನು ಅಂಚೆ ಮೂಲಕ ಮನೆ ಬಾಗಿಲಿಗೆ ತಲುಪಿಸುವ ವಿನೂತನ ಸೇವೆಗೆ ನಗರಸಭೆಯಲ್ಲಿ ಚಾಲನೆ ನೀಡಲಾಯಿತು.
ಇದರಿಂದ ಸಾರ್ವಜನಿಕರು ಪ್ರಮಾಣ ಪತ್ರಕ್ಕಾಗಿ ಪದೇ ಪದೇ ಕಚೇರಿಗಳಿಗೆ ಭೇಟಿ ನೀಡುವ ಅಗತ್ಯ ಕಡಿಮೆಯಾಗಲಿದೆ. ಜನನ ಅಥವಾ ಮರಣ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿ, ಪ್ರಮಾಣ ಪತ್ರ ಸಿದ್ಧವಾದ ನಂತರ ನಿಗದಿತ ಅಂಚೆ ಶುಲ್ಕ 100 ರೂ. ಪಾವತಿಸಿ, ಭಾರತೀಯ ಅಂಚೆ ಇಲಾಖೆಯ ಮೂಲಕ ಮನೆ ಬಾಗಿಲಿಗೆ ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ.
ಈ ಸೇವೆಯು ಸಾರ್ವಜನಿಕರಿಗೆ ಸಮಯ ಮತ್ತು ಶ್ರಮವನ್ನು ಉಳಿಸುವುದರ ಜೊತೆಗೆ ಸರ್ಕಾರಿ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಮಹತ್ವದ ಹೆಜ್ಜೆಯಾಗಿದೆ ನಿಮ್ಮ ಕೋರಿಕೆ ನಮ್ಮ ಸೇವೆ ಎಂಬ ಆಶಯದೊಂದಿಗೆ ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕಾರವಾರ ವಿಭಾಗದ ಅಂಚೆ ಅಧೀಕ್ಷಕ ಹೂವಪ್ಪ ಜಿ ಹಾಗೂ ಕಾರವಾರ ನಗರಸಭೆ ಪೌರಾಯುಕ್ತ ಜಗದೀಶ ಹುಲಗೆಜ್ಜಿ ತಿಳಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250