ಅಕ್ಟೋಬರ್ 25, 2026
ಭಾನುವಾರ

ನಮ್ಮನ್ನು ಅನುಸರಿಸಿ

Crime

ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾ*ವು

Pakka News Web • 27 ಸೆಪ್ಟೆಂ 2026,

ಭಟ್ಕಳ: ತಾಲೂಕಿನ ಶಿರಾಲಿ ಗ್ರಾಮದ ಬಡ್ಡುಕುಳಿ ಸಮೀಪದ ರೈಲು ಹಳಿಯಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ರೈಲಿಗೆ ಸಿಲುಕಿ ಮೃ*ತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಬೈಲೂರು ಗ್ರಾಮದ ನೀರಗದ್ದೆ ನಿವಾಸಿ ತಿಮ್ಮಪ್ಪ ನಾರಾಯಣ ನಾಯ್ಕ (45) ಎಂದು ಗುರುತಿಸಲಾಗಿದೆ. ಅವರು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ಕೆಲವು ಸಮಯದಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಮಡಗಾಂವ್‌ನಿಂದ ತೊಕೂರು ಕಡೆಗೆ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ಅವರು ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಕುರಿತು ಮಾಹಿತಿ ತಿಳಿದ ಮೃತರ ಸಹೋದರ ಕುಮಾರ ನಾರಾಯಣ ನಾಯ್ಕ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ತಮ್ಮನ ಸಾವಿನ ಕುರಿತು ಯಾವುದೇ ಅನುಮಾನ ಇಲ್ಲ ಎಂದು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250