ಅಕ್ಟೋಬರ್ 28, 2026
ಬುಧವಾರ

ನಮ್ಮನ್ನು ಅನುಸರಿಸಿ

Uttara-Kannada

ಜಾಬ್ ಹುಡುಕುತ್ತಿದ್ದವರಿಗೆ ಉತ್ತಮ ಅವಕಾಶ!

Pakka News Web • 29 ಸೆಪ್ಟೆಂ 2026,

ಕಾರವಾರ: ಖಾಸಗಿ ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಸ್ವಾತಂತ್ರ ಮೈಕ್ರೋಪಿನ್ ಲಿಮಿಟೆಡ್ ಕಂಪನಿಯಲ್ಲಿ ಲಭ್ಯವಿರುವ ಈ ಹುದ್ದೆಗಳಿಗೆ ಅಕ್ಟೋಬರ್ 1 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಕುಮಟಾದ ಹೆರವಟ್ಟ ಪೋಸ್ಟ್ ಆಫೀಸ್ ಹತ್ತಿರವಿರುವ ಚಂದಾವರ ರೋಡ್ನಲ್ಲಿ ನೇರ ಸಂದರ್ಶನ ನಡೆಯಲಿದೆ.
ಈ ಸಂದರ್ಶನದಲ್ಲಿ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಇಬ್ಬರೂ ಭಾಗವಹಿಸಲು ಅವಕಾಶವಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ ಅಥವಾ ಯಾವುದೇ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳ ವಯೋಮಿತಿಯು 18 ರಿಂದ 30 ವರ್ಷದೊಳಗೆ ಇರಬೇಕು ಎಂದು ತಿಳಿಸಲಾಗಿದೆ.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಮುರುಡೇಶ್ವರ, ಶಿರಸಿ ಮತ್ತು ಸಿದ್ದಾಪುರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಉದ್ಯೋಗದ ಸ್ಥಳವಿರುತ್ತದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ (Resume) ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಕಚೇರಿಗೆ ನೇರವಾಗಿ ಭೇಟಿ ನೀಡಬಹುದು ಅಥವಾ 8277005959, 8951460061 ಮೊಬೈಲ್ ಸಂಖ್ಯೆಗಳಿಗೆ ಹಾಗೂ ಕಚೇರಿ ದೂರವಾಣಿ ಸಂಖ್ಯೆ 08382-226386 ಗೆ ಸಂಪರ್ಕಿಸಬಹುದೆಂದು ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250