ಅಕ್ಟೋಬರ್ 25, 2026
ಭಾನುವಾರ

ನಮ್ಮನ್ನು ಅನುಸರಿಸಿ

Crime

ಬಸ್–ಲಾರಿ ಡಿಕ್ಕಿ: ಮಗು ಸಾ*ವು, ಹಲವರಿಗೆ ಗಂಭೀರ ಗಾಯ

Pakka News Web • 1 ಆಕ್ಟೋ 2026,

ಅಂಕೋಲಾ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೂವರೆ ವರ್ಷದ ಗಂಡು ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ಅಂಕೋಲಾ ತಾಲೂಕಿನ ಬೆಳಸೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಕುಮಟಾ ಕಡೆಯಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದೆ.

ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ತಕ್ಷಣವೇ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇತರ ಗಾಯಾಳುಗಳಿಗೂ ಸ್ಥಳೀಯವಾಗಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250