ಶಿರಸಿ: ಶಿರಸಿ–ಕುಮಟಾ ಮುಖ್ಯ ರಸ್ತೆಯ ಖೂರ್ಸೆ–ಬಂಡಲ ನಡುವಿನ ಸೇತುವೆ ಬಳಿ ಇನೋವಾ ಕಾರೊಂದು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಭಾಗಕ್ಕೆ ಜಾರಿದ ಘಟನೆ ಗುರುವಾರ ನಡೆದಿದೆ.
ಗೋವಾ ನೋಂದಣಿ ಹೊಂದಿರುವ ಇನೋವಾ ಕಾರು ಏಕಾಏಕಿ ನಿಯಂತ್ರಣ ಕಳೆದುಕೊಂಡು ಸೇತುವೆಯಿಂದ ಕೆಳಕ್ಕೆ ಇಳಿದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರಿಗೆ ಹಾನಿಯಾಗಿರುವುದು ಕಂಡುಬಂದಿದ್ದು, ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಸಂಖ್ಯೆ, ಗಾಯಾಳುಗಳ ಸ್ಥಿತಿ ಹಾಗೂ ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ಖಚಿತವಾಗಿಲ್ಲ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
