ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ ಹಾಗೂ ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳಿಗೆ ಖಾಸಗಿ ಕಂಪನಿಯಾದ ಸ್ವಾತಂತ್ರ ಮೈಕ್ರೋಪಿನ್ ಲಿಮಿಟೆಡ್ನಲ್ಲಿ ಖಾಲಿ ಇರುವ ವಿವಿದ ಹುದ್ದೆಗೆ ಅ.15 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2.30 ಗಂಟೆಯವರೆಗೆ ನೇರ ಸಂದರ್ಶನವನ್ನು ಹೆರವಟ್ಟ ಪೋಸ್ಟ್ ಆಫೀಸ್ ಹತ್ತಿರ ಚಂದಾವರ ರೋಡ್ ಕುಮಟಾದಲ್ಲಿ ಏರ್ಪಡಿಸಲಾಗಿದೆ.
ಈ ಸಂದರ್ಶನದಲ್ಲಿ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ, ಹಾಗೂ ವಯೋಮಿತಿ 18 ರಿಂದ 30 ವರ್ಷ, ಉದ್ಯೋಗದ ಸ್ಥಳ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಮುರುಡೇಶ್ವರ, ಶಿರಸಿ, ಸಿದ್ದಾಪುರ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ರೆಸ್ಯೂಮ್ ಪ್ರತಿಯೊಂದಿಗೆ, ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಳಿಗಾಗಿ ಈ ಕಚೇರಿಯನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 8277005959, 8951460061 ಅಥವಾ ಕಚೇರಿ ದೂರವಾಣಿ ಸಂಖ್ಯೆ: 08382-226386 ಗೆ ಸಂಪರ್ಕಿಸಲು ಉದ್ಯೋಗಾಧಿಕಾರಿಗಳು, ಯೋಜನಾ ಉದ್ಯೋಗ ವಿನಿಮಯ ಕಚೇರಿ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಖಾಸಗಿ ಕಂಪನಿಗಳಲ್ಲಿ ಹುದ್ದೆ: ನೇರ ಸಂದರ್ಶನ!
