ಅಕ್ಟೋಬರ್ 25, 2026
ಭಾನುವಾರ

ನಮ್ಮನ್ನು ಅನುಸರಿಸಿ

Uttara-Kannada

ಬಸ್ ನಿಲ್ದಾಣದಲ್ಲಿ ಅಗ್ನಿ ಅವಘಡದ ಆತಂಕ! ತಪ್ಪಿದ ಅನಾಹುತ 

Pakka News Web • 13 ಆಕ್ಟೋ 2026,

ಶಿರಸಿ: ನಗರದ ಕೇಂದ್ರ ಬಸ್ ನಿಲ್ದಾಣದ ವಿದ್ಯುತ್ ಪ್ಯಾನಲ್ ಕೊಠಡಿಯಿಂದ ದಿಢೀರ್ ಹೊಗೆ ಕಾಣಿಸಿಕೊಂಡಿದ್ದು, ಸಿಬ್ಬಂದಿ ತಕ್ಷಣ ಬೆಂಕಿ ನಂದಿಸುವ ಸಾಧನ ಬಳಸಿ ಮುನ್ನೆಚ್ಚರಿಕೆ ವಹಿಸಿದ್ದರಿಂದ ಸಂಭವನೀಯ ಅನಾಹುತ ತಪ್ಪಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ವಿದ್ಯುತ್ ಪ್ಯಾನಲ್ ಕೊಠಡಿಯಿಂದ ಏಕಾಏಕಿ ಹೊಗೆ ಹೊರಬರುತ್ತಿರುವುದನ್ನು ಗಮನಿಸಿದ ಸಿಬ್ಬಂದಿ ಕೂಡಲೇ ಎಚ್ಚೆತ್ತುಕೊಂಡು ಬೆಂಕಿ ನಂದಿಸುವ ಸಾಧನವನ್ನು ಬಳಸಿದ್ದಾರೆ. ಇದರಿಂದ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಲಾಗಿದ್ದು, ಭಾರೀ ಅನಾಹುತ ಸಂಭವಿಸುವುದನ್ನು ತಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆಗೆ ನಿಖರ ಕಾರಣವೇನು, ವಿದ್ಯುತ್ ಪ್ಯಾನಲ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿತ್ತೇ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದುಬರಬೇಕಿದೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250