ಅಕ್ಟೋಬರ್ 25, 2026
ಭಾನುವಾರ

ನಮ್ಮನ್ನು ಅನುಸರಿಸಿ

Uttara-Kannada

ಹಾರವಾಡ–ಮಾಜಾಳಿ ಸಮುದ್ರ ತೀರದಲ್ಲಿ ಅ.16ರಂದು ಮೀನುಗಾರಿಕೆ ನಿಷೇಧ

Pakka News Web • 15 ಆಕ್ಟೋ 2026,

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನೇವಲ್ ಬೇಸ್‌ಗೆ ಅ.16ರಂದು ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ಭದ್ರತಾ ದೃಷ್ಟಿಯಿಂದ ಹಾರವಾಡದಿಂದ ಮಾಜಾಳಿವರೆಗಿನ ಸಮುದ್ರ ತೀರದಲ್ಲಿ ಮೀನುಗಾರಿಕೆಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಅಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಅಥವಾ ಗಣ್ಯರು ಆಗಮಿಸಿ ನಿರ್ಗಮಿಸುವವರೆಗೆ ಮೀನುಗಾರಿಕೆ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ. ಈ ಅವಧಿಯಲ್ಲಿ ಸಮುದ್ರ ತೀರದ ಸಂಬಂಧಿತ ಪ್ರದೇಶಗಳಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ಮೀನುಗಾರಿಕೆ ಇಲಾಖೆ ಸೂಚಿಸಿದೆ.

ಮೀನುಗಾರರು ಹಾಗೂ ಮೀನುಗಾರಿಕೆ ದೋಣಿಗಳ ಮಾಲೀಕರು ಭದ್ರತಾ ದೃಷ್ಟಿಯಿಂದ ಇಲಾಖೆಯ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250