ಕಾರವಾರ: ಉದ್ಯೋಗದ ನಿರೀಕ್ಷೆಯಲ್ಲಿರುವ ಜಿಲ್ಲೆಯ ಯುವಜನರಿಗೆ ಉದ್ಯೋಗ ಪಡೆಯಲು ಅವಕಾಶವೊಂದು ಒದಗಿಬಂದಿದೆ. ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪನಿಯಾದ ಭಾರತ್ ಆಟೋ ಕಾರ್ಸ್ ಪ್ರೈವೇಟ್ ಲಿಮಿಟೆಡ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅಕ್ಟೋಬರ್ 17ರಂದು ನೇರ ಸಂದರ್ಶನ ಆಯೋಜಿಸಲಾಗಿದೆ.
ಕಾರವಾರದ ಸದಾಶಿವಗಡದಲ್ಲಿರುವ ಮಾರುತಿ ಸುಜುಕಿ ಅರೆನಾ ಶೋರೂಂನಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಂದರ್ಶನ ನಡೆಯಲಿದೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪಡೆದಿರುವ ಅರ್ಹ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಮಹಿಳೆಯರು ಮತ್ತು ಪುರುಷರು ಇಬ್ಬರಿಗೂ ಅವಕಾಶವಿದ್ದು, ಉದ್ಯೋಗದ ಸ್ಥಳ ಕಾರವಾರ ಮತ್ತು ಭಟ್ಕಳವಾಗಿರಲಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಪ್ರತಿಯೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಉದ್ಯೋಗದ ಹುಡುಕಾಟದಲ್ಲಿರುವ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಯೋಜನಾ ಉದ್ಯೋಗ ವಿನಿಮಯ ಕಚೇರಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಕಾರವಾರದ ಯೋಜನಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು. ಅಥವಾ ಮೊಬೈಲ್ ಸಂಖ್ಯೆ 9620902330, 8277005959 ಹಾಗೂ ಕಚೇರಿ ದೂರವಾಣಿ ಸಂಖ್ಯೆ 08382-226386ಕ್ಕೆ ಕರೆ ಮಾಡಬಹುದು ಎಂದು ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
