ಕಾರವಾರ: ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದ ಎ.ಡಿ.ಆರ್. ಕಚೇರಿ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದಸರಾ ಹಬ್ಬದ ಅಂಗವಾಗಿ ದೇವಿಯ ಆರಾಧನೆ ಹಾಗೂ ಆಯುಧ ಪೂಜೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಪರಮೇಶ್ವರ ಪ್ರಸನ್ನ ಬಿ. ಅವರು, ದೇವಿಗೆ ಆರತಿ ಬೆಳಗಿಸುವ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಂಗಳಾರತಿ ನೆರವೇರಿಸಿ ತೀರ್ಥ ಪ್ರಸಾದ ವಿತರಿಸಲಾಯಿತು. ಮಹಿಳಾ ನ್ಯಾಯಾಧೀಶರು, ನ್ಯಾಯವಾದಿಗಳು ಹಾಗೂ ಸಿಬ್ಬಂದಿಗಾಗಿ ಅರಿಶಿನ-ಕುಂಕುಮ ಕಾರ್ಯಕ್ರಮವನ್ನೂ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಧೀಶರು, ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು, ಸರ್ಕಾರಿ ವಕೀಲರು, ನ್ಯಾಯವಾದಿಗಳು, ನ್ಯಾಯಾಲಯದ ಸಿಬ್ಬಂದಿ ಹಾಗೂ ಪ್ಯಾರಾ ಲೀಗಲ್ ವಾಲಂಟಿಯರ್ಗಳು (ಪಿ.ಎಲ್.ವಿ.) ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ನ್ಯಾಯಾಲಯದ ದೈನಂದಿನ ಕಾರ್ಯಚಟುವಟಿಕೆಗಳಿಗೆ ತೊಂದರೆಯಾಗದಂತೆ ಪೂಜಾ ಕಾರ್ಯಕ್ರಮವನ್ನು ನ್ಯಾಯಾಲಯದ ಸಮಯ ಆರಂಭಕ್ಕೂ ಮುನ್ನ ಪೂರ್ಣಗೊಳಿಸಲಾಯಿತು.
