ಕಾರವಾರ:ಬರುವ ಅ.21ರಿಂದ 23ರಂದು ಜಿಲ್ಲೆಯಾದ್ಯಂತ ಹಾಗೂ ದಾಂಡೇಲಿಯಲ್ಲಿ ವಿವಿಧ ಪ್ರದೇಶದಲ್ಲಿ ಅ.20ರಂದು ಮದ್ಯ ಮಾರಾಟ, ಸಾಗಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಆದೇಶ ಮಾಡಿದ್ದಾರೆ.
ಜಿಲ್ಲಾಧಿಕಾರಿ ಅವರ ಪ್ರತ್ಯೇಕ ಆದೇಶ ಹೊರಡಿಸಿದ್ದು ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ-2026 ರ ನಿಮಿತ್ತ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮತದಾನವು ಮುಕ್ತಾಯಗೊಳ್ಳುವ ನಲವತ್ತೆಂಟು ಗಂಟೆಗಳ ಕಾಲ ಅ.21 ರ ಸಂಜೆ 4 ಗಂಟೆಯಿಂದ ಅ.23 ರ ರಾತ್ರಿ 12 ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟ/ಸಾಗಾಟವನ್ನು ನಿಷೇಧಿಸಿ, ಈ ದಿನವನ್ನು ಒಣ ದಿನಗಳೆಂದು ಘೋಷಿಸಿ ಆದೇಶಿಸಿ ಮತ್ತು ನೀತಿ ಸಂಹಿತೆ ಜಾರಿಯಲ್ಲಿರುವ ಪ್ರದೇಶಗಳಲ್ಲಿ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಮಚ್ಚುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಕೆ. ಆದೇಶ ಹೊರಡಿಸಿದ್ದಾರೆ.
ದಾಂಡೇಲಪ್ಪ ಜಾತ್ರೆ: ಮದ್ಯ ಮಾರಾಟ ನಿಷೇಧ
ದಾಂಡೇಲಪ್ಪ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ದಾಂಡೇಲಿ ನಗರ ಹಾಗೂ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ಕ್ರಮ ವಹಿಸುವ ಸಲುವಾಗಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಅ.20 ರ ಬೆಳಗ್ಗೆ 6 ಗಂಟೆಯಿಂದ ಅ.21 ರ ಬೆಳಗ್ಗೆ 6 ಗಂಟೆಯವರೆಗೆ ದಾಂಡೇಲಿ ನಗರ ಹಾಗೂ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿ, ವೈನ್ ಶಾಪ್ ಬಂದ್ ಮಾಡುವಂತೆ ಹಾಗೂ ಮದ್ಯ ಸಾಗಾಟ ಹಾಗೂ ಮಾರಾಟವನ್ನು ನಿಷೇಧಿಸಿದ್ದಾರೆ.
