ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರನ್ನು ಹೆಚ್ಚಿನ ಬಹುಮತದಿಂದ ಗೆಲ್ಲಿಸುವಂತೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಹನೀಫ್ ಖುರೇಶಿ ಪದವೀಧರ ಮತದಾರರಲ್ಲಿ ಮನವಿ ಮಾಡಿದ್ದಾರೆ.

ಅಕ್ಟೋಬರ್ 23ರಂದು ನಡೆಯಲಿರುವ ಚುನಾವಣೆಯಲ್ಲಿ ಪದವೀಧರ ಮತದಾರರು ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ತಮ್ಮ ಅಮೂಲ್ಯ ಮತವನ್ನು ಚಲಾಯಿಸುವ ಮೂಲಕ ಅವರ ಗೆಲುವಿಗೆ ಸಹಕರಿಸಬೇಕು. ಮತಪತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರ ಕ್ರಮ ಸಂಖ್ಯೆ 01ಕ್ಕೆ ಪ್ರಾಶಸ್ತ್ಯದ ಮತ ನೀಡುವ ಮೂಲಕ ಅವರನ್ನು ವಿಧಾನ ಪರಿಷತ್ತಿಗೆ ಆಯ್ಕೆ ಮಾಡಲು ಕೈಜೋಡಿಸಬೇಕು ಎಂದು ಹನೀಫ್ ಖುರೇಶಿ ಮನವಿ ಮಾಡಿದ್ದಾರೆ.
ಪದವೀಧರ ಮತದಾರರು ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಾಂಗ್ರೆಸ್ ಅಭ್ಯರ್ಥಿಗೆ ತಮ್ಮ ಬೆಂಬಲ ವ್ಯಕ್ತಪಡಿಸಬೇಕು. ಪ್ರಜಾಪ್ರಭುತ್ವದ ಪ್ರಕ್ರಿಯೆಯಲ್ಲಿ ಪ್ರತಿಯೊಂದು ಮತವೂ ಮಹತ್ವದ್ದಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ಮೋಹನ್ ಲಿಂಬಿಕಾಯಿ ಅವರ ಗೆಲುವಿಗೆ ಶಕ್ತಿ ತುಂಬಬೇಕು ಎಂದು ಅವರು ಕರೆ ನೀಡಿದ್ದಾರೆ.
ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚಿನ ಬಹುಮತ ದೊರೆಯುವಂತೆ ಪದವೀಧರ ಮತದಾರರು ಬೆಂಬಲ ನೀಡಬೇಕು. ಕ್ರಮ ಸಂಖ್ಯೆ 01ಕ್ಕೆ ಪ್ರಾಶಸ್ತ್ಯದ ಮತ ಚಲಾಯಿಸಿ ಮೋಹನ್ ಲಿಂಬಿಕಾಯಿ ಅವರನ್ನು ಗೆಲ್ಲಿಸಬೇಕು ಎಂದು ಹನೀಫ್ ಖುರೇಶಿ ಪುನರುಚ್ಚರಿಸಿದ್ದಾರೆ.
.
