ಕಾರವಾರ: ಪಶ್ಚಿಮ ಪದವೀಧರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರನ್ನು ಹೆಚ್ಚಿನ ಬಹುಮತದಿಂದ ಗೆಲ್ಲಿಸಲು ಪದವೀಧರ ಮತದಾರರು ಬೆಂಬಲ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರಾದ ದಿಲ್ಶಾದ್ ಕುಟ್ಟಿ, ವಿಶ್ವನಾಥ ಕಲ್ಗುಟ್ಕರ್ ಹಾಗೂ ಸ್ನೇಹಾ ಹಳದನಕರ್ ಮನವಿ ಮಾಡಿದ್ದಾರೆ.

ಅಕ್ಟೋಬರ್ 23ರಂದು ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ ಅಭ್ಯರ್ಥಿಯ ಪರವಾಗಿ ಮತಯಾಚಿಸಿರುವ ಅವರು, ಪದವೀಧರ ಮತದಾರರು ತಮ್ಮ ಅಮೂಲ್ಯ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಸಹಕರಿಸಬೇಕು ಎಂದು ಕೋರಿದ್ದಾರೆ. ಮತಪತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರ ಕ್ರಮ ಸಂಖ್ಯೆ 01ಕ್ಕೆ ಪ್ರಾಶಸ್ತ್ಯದ ಮತ ನೀಡುವ ಮೂಲಕ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
ಪದವೀಧರ ಮತಕ್ಷೇತ್ರದ ಚುನಾವಣೆ ಪ್ರಜಾಪ್ರಭುತ್ವದ ಮಹತ್ವದ ಪ್ರಕ್ರಿಯೆಯಾಗಿದ್ದು, ಪ್ರತಿಯೊಬ್ಬ ಮತದಾರರ ಮತವೂ ಅಭ್ಯರ್ಥಿಯ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಅಭ್ಯರ್ಥಿಯ ಪರವಾಗಿ ಮತದಾರರನ್ನು ಸಂಪರ್ಕಿಸಬೇಕು ಎಂದು ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಚಿತ್ತಾಕುಲಾ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಹಾಗೂ ಕಾರವಾರ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ದಿಲ್ಶಾದ್ ಕುಟ್ಟಿ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ಮಾಜಿ ಅಧ್ಯಕ್ಷರು ಹಾಗೂ ಕಾರವಾರ ನಗರಸಭೆಯ ಮಾಜಿ ಸದಸ್ಯ ವಿಶ್ವನಾಥ ಕಲ್ಗುಟ್ಕರ್ ಮತ್ತು ಚಿತ್ತಾಕುಲಾ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಹಾಗೂ ಪಂಚ್ ಗ್ಯಾರಂಟಿ ಸದಸ್ಯೆ ಸ್ನೇಹಾ ಹಳದನಕರ್ ಅವರು ಪದವೀಧರ ಮತದಾರರಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.
