ಶಿರಸಿ: ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಶಿರಸಿ ತಾಲೂಕಿನ ಗ್ರಾಮೀಣ-1 ಶಾಖಾ ವ್ಯಾಪ್ತಿಯ ಚಿಪಗಿ ಫೀಡರ್‌ನಲ್ಲಿ ಅ.22ರಂದು ಗುರುವಾರ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಶಿರಸಿಯ 110/11 ಕೆ.ವಿ. ವಿದ್ಯುತ್ ಉಪಕೇಂದ್ರದಿಂದ ಹೊರಡುವ ಚಿಪಗಿ ಫೀಡರ್ ವ್ಯಾಪ್ತಿಯಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿರುವುದರಿಂದ ಈ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ನಿಗದಿತ ಅವಧಿಗೂ ಮುನ್ನ ಕಾಮಗಾರಿ ಪೂರ್ಣಗೊಂಡಲ್ಲಿ ತಕ್ಷಣವೇ ವಿದ್ಯುತ್ ಸರಬರಾಜು ಪುನರಾರಂಭಿಸಲಾಗುವುದು. ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂ ಶಿರಸಿ ವಿಭಾಗ ಮನವಿ ಮಾಡಿದೆ.
